
ಪಿಟಿಐ
ಕೊಲಂಬೊ: ಮಾದಕ ವಸ್ತುಗಳಿಗೆ ಸಂಬಂಧಿಸಿದ ಅಪರಾಧಗಳ ವಿರುದ್ಧ ಶ್ರೀಲಂಕಾ ಬೃಹತ್ ಕಾರ್ಯಾಚರಣೆ ನಡೆಸುತ್ತಿದೆ. ಈ ಸಂಬಂಧ 1,000ಕ್ಕೂ ಹೆಚ್ಚು ಜನರನ್ನು ಬಂಧಿಸಿ, ಡ್ರಗ್ಸ್‌ಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.
‘ಎ ನೇಷನ್ ಯುನೈಟೆಡ್’ ಎಂಬ ಅಭಿಯಾನದಡಿ ಶುಕ್ರವಾರ ಕಾರ್ಯಾಚರಣೆ ನಡೆದಿದೆ. ಶ್ರೀಲಂಕಾ ಅಧ್ಯಕ್ಷ ಅನುರಾ ಕುಮಾರ ದಿಸ್ಸನಾಯಕೆ ಅವರು ಅಕ್ಟೋಬರ್ 30ರಂದು ಸಾರ್ವಜನಿಕ ಚಳವಳಿ ಮಾದರಿಯ ಅಭಿಯಾನಕ್ಕೆ ಚಾಲನೆ ನೀಡಿದ್ದರು.
ಮಾದಕ ವಸ್ತುಗಳ ಪೂರೈಕೆ ಜಾಲದ ನಿಯಂತ್ರಣ, ಮಾದಕ ವಸ್ತು ನಿಗ್ರಹ ಕಾರ್ಯಾಚರಣೆ ವಿಸ್ತರಣೆ, ವ್ಯಸನಿಗಳಿಗೆ ಪುನರ್ವಸತಿ ಕಲ್ಪಿಸುವುದು ಅಭಿಯಾನದ ಭಾಗವಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.