ಮಾಂಟ್ಗೊಮೆರಿ, ಅಮೆರಿಕ: ಶನಿವಾರ ತಡರಾತ್ರಿಯಿಂದ ಭಾನುವಾರ ಬೆಳಗಿನವರೆಗೂ ಬೀಸಿದ ಚಂಡಮಾರುತದಿಂದಾಗಿಅಮೆರಿಕದ ದಕ್ಷಿಣದಲ್ಲಿರುವ ಕೆಲವು ಪ್ರದೇಶಗಳಲ್ಲಿ ಅಪಾರ ಹಾನಿಯಾಗಿದೆ. ಅನೇಕ ಮನೆಗಳು ಹಾನಿಗೊಂಡಿದ್ದು, ಕೆಲವೆಡೆ ವಿದ್ಯುತ್ ಕಡಿತಗೊಂಡಿದೆ. ಹಲವೆಡೆ ಮರಗಳು ಧರೆಗೆ ಉರುಳಿವೆ.
ಮರಗಳು ಉರುಳಿ, ವಿದ್ಯುತ್ ಸಂಪರ್ಕ ಕಡಿತಗೊಂಡ ಬೆನ್ನಲ್ಲೇ ಹ್ಯಾಝೆಲ್ ಗ್ರೀನ್, ಆಲಬಾಮಾದಲ್ಲಿನ ರಸ್ತೆಗಳನ್ನು ಸ್ಥಳೀಯ ಅಧಿಕಾರಿಗಳು ಬಂದ್ ಮಾಡಿದ್ದಾರೆ. ಬಿರುಗಾಳಿಗೆ ಸಿಕ್ಕು ವಿದ್ಯುತ್ ಕಂಬಗಳು ನೆಲಕ್ಕುರುಳಿದ ಚಿತ್ರಗಳು ಸೇರಿದಂತೆ, ಚಂಡಮಾರುತದಿಂದಾಗಿ ಆಗಿರುವ ಹಾನಿಗೆ ಸಂಬಂಧಿಸಿದ ಚಿತ್ರಗಳನ್ನು ಮ್ಯಾಡಿಸನ್ ಕೌಂಟಿಯ ಪೊಲೀಸ್ ಇಲಾಖೆಯು ತನ್ನ ಜಾಲತಾಣದಲ್ಲಿ ಹಂಚಿಕೊಂಡಿದೆ.
ಮನೆಗಳನ್ನು ಕಳೆದುಕೊಂಡಿರುವವರಿಗೆ ತಾತ್ಕಾಲಿಕ ಶಿಬಿರಗಳಲ್ಲಿ ಆಶ್ರಯ ನೀಡಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.