ನ್ಯೂಯಾರ್ಕ್/ ವಾಷಿಂಗ್ಟನ್: ಭಾರತ–ಪಾಕಿಸ್ತಾನದ ಮಧ್ಯೆ ಉಂಟಾಗಿರುವ ಬಿಗುವಿನ ವಾತಾವರಣವನ್ನು ತಿಳಿಗೊಳಿಸಲು ಉಭಯ ದೇಶಗಳು ಮುಂದಾಗಬೇಕು ಎಂದು ಅಮೆರಿಕ ಮನವಿ ಮಾಡಿದೆ.
ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮ್ಯಾಕ್ರೊ ರುಬಿಯೊ ಅವರು ಉಭಯ ದೇಶಗಳ ವಿದೇಶಾಂಗ ಸಚಿವರುಗಳೊಂದಿಗೆ ಶೀಘ್ರವೇ ಮಾತುಕತೆ ನಡೆಸಲಿದ್ದಾರೆ.
ವಿದೇಶಾಂಗ ಇಲಾಖೆ ವಕ್ತಾರ ಟಮ್ಮಿ ಬ್ರೂಸ್ ಅವರು, ‘ಅಮೆರಿಕವು ಕಾಶ್ಮೀರ ವಿಚಾರಕ್ಕೆ ಸಂಬಂಧಿಸಿದಂತೆ ಭಾರತ–ಪಾಕಿಸ್ತಾನವನ್ನು ಸಂಪರ್ಕಿಸಿದೆ. ಪರಿಸ್ಥಿತಿ ಬಿಗಡಾಯಿಸದಂತೆ ಮತ್ತು ಸಂಯಮ ಕಾಯ್ದುಕೊಳ್ಳುವಂತೆ ಹೇಳಿದೆ’ ಎಂದು ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.