ADVERTISEMENT

ಭಾರತದ ವಿಮಾನಗಳಿಗೆ ವಾಯುಪ್ರದೇಶ ನಿರ್ಬಂಧ; ಪಾಕ್‌ಗೆ ₹4.1 ಶತಕೋಟಿ ನಷ್ಟ: ವರದಿ

ಪಿಟಿಐ
Published 10 ಆಗಸ್ಟ್ 2025, 6:14 IST
Last Updated 10 ಆಗಸ್ಟ್ 2025, 6:14 IST
<div class="paragraphs"><p>  ವಿಮಾನ</p></div>

ವಿಮಾನ

   

– ಪಿಟಿಐ ಚಿತ್ರ

ಇಸ್ಲಾಮಾಬಾದ್: ಭಾರತೀಯ ವಿಮಾನಗಳಿಗೆ ವಾಯುಪ್ರದೇಶವನ್ನು ನಿರ್ಬಂಧಿಸಿದ ಪರಿಣಾಮ ಪಾಕಿಸ್ತಾನದ ವಿಮಾನ ನಿಲ್ದಾಣ ಪ್ರಾಧಿಕಾರ ಎರಡು ತಿಂಗಳಲ್ಲಿ ₹4.1 ಶತಕೋಟಿ ನಷ್ಟವನ್ನು ಅನುಭವಿಸಿದೆ ಎಂದು ಅಧಿಕೃತ ಮಾಹಿತಿ ತಿಳಿಸಿದೆ.

ADVERTISEMENT

ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಏಪ್ರಿಲ್‌ 22ರಂದು ಉಗ್ರರು ದಾಳಿ ನಡೆಸಿದ ಬಳಿಕ ಭಾರತ –ಪಾಕಿಸ್ತಾನ ಉದ್ವಿಗ್ನತೆ ಹೆಚ್ಚಿತ್ತು. ಈ ಸಂದರ್ಭದಲ್ಲಿ ಎರಡು ದೇಶಗಳು ವಿಮಾನ ಹಾರಾಟಕ್ಕೆ ವಾಯುಪ್ರದೇಶವನ್ನು ನಿರ್ಬಂಧಿಸಿದ್ದವು.

ಭಾರತ ಕೈಗೊಂಡ 4 ದಿನಗಳ ಆಪರೇಷನ್‌ ಸಿಂಧೂರ ಕಾರ್ಯಾಚರಣೆ ಬಳಿಕವೂ ವಾಯುಪ್ರದೇಶ ನಿರ್ಬಂಧವನ್ನು ಮುಂದುವರಿಸಲಾಗಿದೆ.

ಭಾರತೀಯ ವಿಮಾನಗಳಿಗೆ ಪಾಕ್‌ ವಾಯುಪ್ರದೇಶದಲ್ಲಿ ನಿರ್ಬಂಧ ಹೇರಿದ ಪರಿಣಾಮ ಪಾಕಿಸ್ತಾನ ವಿಮಾನ ನಿಲ್ದಾಣ ಪ್ರಾಧಿಕಾರಕ್ಕೆ ₹4.1 ಶತಕೋಟಿ ನಷ್ಟವಾಗಿದೆ ಎಂದು ಸಂಸತ್ತಿಗೆ ರಕ್ಷಣಾ ಸಚಿವಾಲಯ ಮಾಹಿತಿ ನೀಡಿರುವುದಾಗಿ ಡಾನ್ ಪತ್ರಿಕೆ ವರದಿ ಮಾಡಿದೆ.

ಪಾಕಿಸ್ತಾನ ವಾಯುಪ್ರದೇಶದಲ್ಲಿ ಭಾರತದ ವಿಮಾನಗಳಿಗೆ ಹೊರತುಪಡಿಸಿ ಉಳಿದೆಲ್ಲ ದೇಶಗಳ ವಿಮಾನಗಳ ಹಾರಾಟಕ್ಕೆ ಅವಕಾಶವಿದೆ. ಇದೇ ರೀತಿ ಭಾರತೀಯ ವಾಯುಪ್ರದೇಶದಲ್ಲಿ ಪಾಕಿಸ್ತಾನ ವಿಮಾನಗಳಿಗೆ ಹೊರತುಪಡಿಸಿ ಉಳಿದೆಲ್ಲ ವಿಮಾನಗಳ ಹಾರಾಟಕ್ಕೆ ಅವಕಾಶವಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.