ADVERTISEMENT

ಸ್ಪಷ್ಟ ಸಂದೇಶ ರವಾನಿಸಿದ್ದೇವೆ: ಆಪರೇಷನ್ ಸಿಂಧೂರದ ಬಗ್ಗೆ ಸಚಿವ ಜೈಶಂಕರ್ ಮಾತು

ಪಿಟಿಐ
Published 3 ಜುಲೈ 2025, 5:11 IST
Last Updated 3 ಜುಲೈ 2025, 5:11 IST
<div class="paragraphs"><p>ವಿದೇಶಾಂಗ ಸಚಿವ ಎಸ್. ಜೈಶಂಕರ್</p></div>

ವಿದೇಶಾಂಗ ಸಚಿವ ಎಸ್. ಜೈಶಂಕರ್

   

ಪಿಟಿಐ ಚಿತ್ರ

ನ್ಯೂಯಾರ್ಕ್‌/ವಾಷಿಂಗ್ಟನ್‌: ಭಾರತವು ಭಯೋತ್ಪಾದನೆ, ಉಗ್ರವಾದದ ವಿರುದ್ಧ ಕ್ರಮ ಕೈಗೊಳ್ಳುತ್ತದೆ ಎಂಬ ಸ್ಪಷ್ಟ ಸಂದೇಶವನ್ನು 'ಆಪರೇಷನ್‌ ಸಿಂಧೂರ' ಜಗತ್ತಿಗೆ ಸಾರಿದೆ ಎಂದು ವಿದೇಶಾಂಗ ಸಚಿವ ಎಸ್‌. ಜೈಶಂಕರ್‌ ಹೇಳಿದ್ದಾರೆ. ಪಹಲ್ಗಾಮ್‌ ದಾಳಿಗೆ ಕಾರಣವಾದವರನ್ನು ಶಿಕ್ಷೆಗೊಳಪಡಿಸಬೇಕು ಎಂಬ ಕ್ವಾಡ್‌ ಸದಸ್ಯ ರಾಷ್ಟ್ರಗಳ ಒತ್ತಾಯ ಹಾಗೂ ವಿಶ್ವಸಂಸ್ಥೆಯ ಭದ್ರತಾ ಮಂಡಳಿ (ಯುಎನ್‌ಎಸ್‌ಸಿ) ಕರೆಗೆ ಅನುಗುಣವಾಗಿ ಈ ಹೇಳಿಕೆ ನೀಡಿದ್ದಾರೆ.

ADVERTISEMENT

ವಾಷಿಂಗ್ಟನ್‌ನಲ್ಲಿ ಬುಧವಾರ ಮಾಧ್ಯಮದರೊಂದಿಗೆ ಮಾತನಾಡಿರುವ ಜೈಶಂಕರ್‌, 'ಕ್ವಾಡ್‌ ನಾಯಕರ ಜಂಟಿ ಹೇಳಿಕೆ ಹಾಗೂ ಯುಎನ್‌ಎಸ್‌ಸಿ ಏಪ್ರಿಲ್‌ 25ರಂದು ಪ್ರಕಟಿಸಿದ ಹೇಳಿಕೆಯಲ್ಲಿ ಉಗ್ರ ದಾಳಿಯ ಅಪರಾಧಿಗಳನ್ನು ಹೊಣೆಗಾರರನ್ನಾಗಿಸಬೇಕು ಹಾಗೂ ಶಿಕ್ಷಿಸಬೇಕು ಎಂಬುದು ನಮ್ಮ ಮುಖ್ಯ ಉದ್ದೇಶವಾಗಿತ್ತು' ಎಂದಿದ್ದಾರೆ.

'ಭಯೋತ್ಪಾದನೆ ದಾಳಿಗಳು ನಡೆಸಿದರೆ, ಅಪರಾಧಿಗಳು, ನೆರವಾದವರು ಮತ್ತು ಹಣಕಾಸು ಒದಗಿಸಿದವರ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ ಎಂಬುದನ್ನು ತಿಳಿಸುವುದು ಮೇ 7ರಂದು ನಡೆಸಿದ ನಾವು ಆಪರೇಷನ್‌ ಸಿಂಧೂರದ ಉದ್ದೇಶವಾಗಿದೆ. ಅದರ ಮೂಲಕ, ಸ್ಪಷ್ಟ ಸಂದೇಶ ರವಾನಿಸಲಾಗಿದೆ ಎಂದು ಭಾವಿಸಿದ್ದೇವೆ' ಎಂದು ತಿಳಿಸಿದ್ದಾರೆ.

ಮಂಗಳವಾರ ನಡೆದ 'ಕ್ವಾಡ್‌' ಸದಸ್ಯ ರಾಷ್ಟ್ರಗಳ ಸಭೆಯಲ್ಲಿ ಪಹಲ್ಗಾಮ್‌ ದಾಳಿ ಖಂಡನೆ ವ್ಯಕ್ತವಾಗಿದೆ.

ಸದಸ್ಯ ರಾಷ್ಟ್ರಗಳಾದ ಭಾರತ, ಅಮೆರಿಕ, ಜಪಾನ್‌ ಮತ್ತು ಆಸ್ಟ್ರೇಲಿಯಾದ ವಿದೇಶಾಂಗ ಸಚಿವರ ಜಂಟಿ ಹೇಳಿಕೆಯಲ್ಲಿ 'ಗಡಿಯಾಚಿನ ಭಯೋತ್ಪಾದನೆ, ಉಗ್ರ ಚಟುವಟಿಕೆಗಳು ಸೇರಿದಂತೆ ಯಾವುದೇ ರೀತಿಯ ಹಿಂಸಾಕೃತ್ಯಗಳನ್ನು ಕ್ವಾಡ್‌ ನಿಸ್ಸಂದೇಹವಾಗಿ ಖಂಡಿಸುತ್ತದೆ' ಎಂದು ಉಲ್ಲೇಖಿಸಲಾಗಿದೆ.

ಇಂತಹ ಖಂಡನೀಯ ಕತ್ಯವೆಸಗಿದವರು, ಸಂಘಟನೆಗಳು, ಅವರಿಗೆ ಹಣಕಾಸು ನೆರವು ನೀಡುತ್ತಿರುವವರನ್ನು ನ್ಯಾಯಾಂಗದೆದುರು ನಿಲ್ಲಿಸಲು ವಿಶ್ವಸಂಸ್ಥೆಯ ಎಲ್ಲ ಸದಸ್ಯ ರಾಷ್ಟ್ರಗಳು ಸಂಬಂಧಪಟ್ಟ ಆಡಳಿತಗಳಿಗೆ ಸಹಕರಿಸುವಂತೆ ಕರೆ ನೀಡಲಾಗಿದೆ.

ಜಮ್ಮ ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಏಪ್ರಿಲ್‌ 22ರಂದು ಗುಂಡಿನ ದಾಳಿ ನಡೆಸಿದ್ದ ಉಗ್ರರು, 26 ಪ್ರವಾಸಿಗರನ್ನು ಹತ್ಯೆ ಮಾಡಿದ್ದರು. ಅದಕ್ಕೆ ಪ್ರತಿಯಾಗಿ ಭಾರತೀಯ ಸೇನಾ ಪಡೆಗಳು ಪಾಕಿಸ್ತಾನ ಹಾಗೂ ಪಾಕ್‌ ಆಕ್ರಮಿತ ಕಾಶ್ಮೀರದಲ್ಲಿನ ಉಗ್ರರ ನೆಲೆಗಳ ಮೇಲೆ ಮೇ 7ರಂದು 'ಆಪರೇಷನ್‌ ಸಿಂಧೂರ' ನಡೆಸಿದ್ದವು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.