ಇಸ್ಲಾಮಾಬಾದ್: ಗಡಿಯಲ್ಲಿ ತಕ್ಷಣದಿಂದ ಜಾರಿಗೆ ಬರುವಂತೆ ಕದನ ವಿರಾಮ ಘೋಷಿಸಿ, ಶಾಂತಿ ಮರುಸ್ಥಾಪನೆಗೆ ಮುಂದಾಗಲು ಪಾಕಿಸ್ತಾನ–ಅಫ್ಗಾನಿಸ್ತಾನ ಭಾನುವಾರ ಒಪ್ಪಿಗೆ ಸೂಚಿಸಿವೆ.
ಪಾಕಿಸ್ತಾನದ ರಕ್ಷಣಾ ಸಚಿವ ಖ್ವಾಜಾ ಆಸಿಫ್ ಮತ್ತು ಅಫ್ಗಾನಿಸ್ತಾನದ ಹಂಗಾಮಿ ರಕ್ಷಣಾ ಸಚಿವ ಮುಲ್ಲಾ ಯಾಕೂಬ್ ದೋಹಾದಲ್ಲಿ ಮಾತುಕತೆ ನಡೆಸಿದ ಬೆನ್ನಲ್ಲೇ ಉಭಯ ದೇಶಗಳು ಕದನ ವಿರಾಮಕ್ಕೆ ಒಪ್ಪಿವೆ ಎಂದು ಕತಾರ್‌ನ ವಿದೇಶಾಂಗ ಸಚಿವಾಲಯ ಹೇಳಿದೆ. ಈ ಸಂಧಾನಕ್ಕೆ ಕತಾರ್ ಮತ್ತು ಟರ್ಕಿ ಮಧ್ಯಸ್ಥಿಕೆ ವಹಿಸಿದ್ದವು.
ಶಾಂತಿ ಮರುಸ್ಥಾಪನೆ ಮತ್ತು ಸ್ಥಿರತೆ ತರುವ ವಿಚಾರದಲ್ಲಿ ಸಭೆಗಳು ನಡೆಯಲಿವೆ ಎಂದು ಉಭಯ ದೇಶಗಳು ಹೇಳಿವೆ. ನಿಷೇಧಿತ ತೆಹ್ರೀಕ್–ಎ–ತಾಲಿಬಾನ್ ಪಾಕಿಸ್ತಾನ್‌ನ (ಟಿಟಿಪಿ) ವಿರುದ್ಧ ಕ್ರಮ ಕೈಗೊಳ್ಳುವಂತೆ ಪಾಕಿಸ್ತಾನವು ದೋಹಾ ಸಭೆಯಲ್ಲಿ ಅಘ್ಗಾನಿಸ್ತಾನವನ್ನು ಒತ್ತಾಯಿಸಿದೆ.
ಕಳೆದ ವಾರ ಕಾಬೂಲ್‌ನಲ್ಲಿ ಪಾಕಿಸ್ತಾನವು ವಾಯು ದಾಳಿ ನಡೆಸಿದ ಬೆನ್ನಲ್ಲೇ, ಪಾಕ್–ಅಘ್ಗನ್ ಗಡಿಯಲ್ಲಿ ಸಂಘರ್ಷ ಉಲ್ಬಣಗೊಂಡಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.