ಸಾವು
ಪ್ರಾತಿನಿಧಿಕ ಚಿತ್ರ
ಇಸ್ಲಾಮಾಬಾದ್(ಪಾಕಿಸ್ತಾನ): ಇಲ್ಲಿನ ಖೈಬರ್ ಪಖ್ತುಂಖ್ವಾ ಪ್ರಾಂತ್ಯದಲ್ಲಿ ಪಾಕಿಸ್ತಾನ ವಾಯುಪಡೆ ನಡೆಸಿದ ವೈಮಾನಿಕ ದಾಳಿಯಲ್ಲಿ ಮಕ್ಕಳು, ಮಹಿಳೆಯರು ಸೇರಿದಂತೆ ಕನಿಷ್ಠ 30 ಮಂದಿ ಮೃತಪಟ್ಟಿದ್ದಾರೆ.
ಈ ಬಗ್ಗೆ 'ಎನ್‌ಡಿಟಿವಿ' ವರದಿ ಮಾಡಿದೆ. ಸೋಮವಾರ ಮುಂಜಾನೆ 2ರ ಸುಮಾರಿಗೆ ತಿರಾಹ ಕಣಿವೆಯಲ್ಲಿರುವ ಮಾತ್ರೆ ದಾರಾ ಗ್ರಾಮದ ಮೇಲೆ 8 ಎಲ್‌ಎಸ್ -6 ಬಾಂಬ್‌ಗಳನ್ನು ಸ್ಪೋಟಿಸಿದ್ದು, ಇದರಿಂದಾಗಿ ಭಾರಿ ಹತ್ಯಾಕಾಂಡ ಸಂಭವಿಸಿದೆ.
ಮೃತರೆಲ್ಲರೂ ಅಲ್ಲಿನ ನಾಗರಿಕರು. ಘಟನೆಯಲ್ಲಿ ಹಲವರು ಗಾಯಗೊಂಡಿದ್ದಾರೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.