ADVERTISEMENT

ಪಾಕಿಸ್ತಾನದಿಂದ ವೈಮಾನಿಕ ದಾಳಿ: ಅಫ್ಗಾನಿಸ್ತಾನದ ಮೂವರು ಕ್ರಿಕೆಟಿಗರು ಸಾವು

ಪಿಟಿಐ
Published 18 ಅಕ್ಟೋಬರ್ 2025, 3:11 IST
Last Updated 18 ಅಕ್ಟೋಬರ್ 2025, 3:11 IST
<div class="paragraphs"><p>ಸಿಬ್ಘತುಲ್ಲಾ,&nbsp; ಹರೂನ್,&nbsp;ಕಬೀರ್ ( ಕೃಪೆ: ಎಸಿಬಿ ಎಕ್ಸ್‌ ಖಾತೆ)</p></div>

ಸಿಬ್ಘತುಲ್ಲಾ,  ಹರೂನ್, ಕಬೀರ್ ( ಕೃಪೆ: ಎಸಿಬಿ ಎಕ್ಸ್‌ ಖಾತೆ)

   

ಕಾಬೂಲ್: ಪಾಕಿಸ್ತಾನ ಹಾಗೂ ಅಫ್ಗನ್ ನಡುವೆ ಸಂಘರ್ಷ ಮುಂದುವರೆದಿದ್ದು ಪಾಕ್‌ ನಡೆಸಿದ ವೈಮಾನಿಕ ದಾಳಿಯಲ್ಲಿ ಅಫ್ಗಾನಿಸ್ತಾನದ ಮೂವರು ಕ್ರಿಕೆಟರ್‌ಗಳು ಮೃತಪಟ್ಟಿದ್ದಾರೆ.

ಈ ಬಗ್ಗೆ ಅಫ್ಗಾನಿಸ್ತಾನದ ಕ್ರಿಕೆಟ್‌ ಮಂಡಳಿ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಸ್ಥಳೀಯ ಕ್ರಿಕೆಟಿಗರು ಮೃತಪಟ್ಟಿರುವುದನ್ನು ಖಚಿತಪಡಿಸಿ  ಶೋಕ ವ್ಯಕ್ತಪಡಿಸಿದೆ.

ADVERTISEMENT

ಸೌಹಾರ್ದ ಪಂದ್ಯದಲ್ಲಿ ಭಾಗವಹಿಸಲು ಅಫ್ಗನ್ ಕ್ಲಬ್‌ ಮಟ್ಟದ ಯುವ ಆಟಗಾರರು ಪಾಕಿಸ್ತಾನ ಗಡಿಯಲ್ಲಿರುವ ಪೂರ್ವ ಪಕ್ತಿಕಾ ಪ್ರಾಂತ್ಯದ ಉರ್ಗುನ್‌ನಿಂದ ಶರಾನಾಗೆ ಪ್ರಯಾಣಿಸಿದ್ದರು. ಈ ವೇಳೆ ದಾಳಿ ನಡೆದಿದ್ದು, ಇದರಿಂದ ಮೂವರು ಕ್ರಿಕೆಟಿಗರು ಹಾಗೂ ಐವರು ನಾಗರಿಕರು ಸಾವನ್ನಪ್ಪಿದ್ದು, ಇನ್ನು ಕೆಲವರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.

ಪಾಕ್ ದಾಳಿಗೆ ಮೃತಪಟ್ಟ ಕ್ರಿಕೆಟಿಗರನ್ನು ಕಬೀರ್, ಸಿಬ್ಘತುಲ್ಲಾ ಮತ್ತು ಹರೂನ್ ಎಂದು ಗುರುತಿಸಲಾಗಿದೆ. ಈ ದಾಳಿ ವಿರುದ್ಧ ಅಫ್ಗಾನಿಸ್ತಾನ ಕ್ರಿಕೆಟಿಗರು ಧ್ವನಿಯೆತ್ತಿದ್ದು, ತಮ್ಮ ಸೋಷಿಯಲ್ ಮೀಡಿಯಾ ಖಾತೆಯಲ್ಲಿ ಆಕ್ರೋಶವನ್ನು ಹೊರಹಾಕಿದ್ದಾರೆ.

ಕ್ರಿಕೆಟಿಗ ರಶೀದ್‌ ಖಾನ್‌ ಕೂಡ ಪಾಕ್‌ ದಾಳಿಯನ್ನು ಖಂಡಿಸಿದ್ದಾರೆ. ನಾಗರಿಕರ ಮೇಲೆ ದಾಳಿ ಮಾಡಿವುದು ಸರಿಯಲ್ಲ ಎಂದು ಸಾಮಾಜಿಕ ಮಾಧ್ಯಮಗಳಲ್ಲಿ ಪಾಕ್‌ ವಿರುದ್ಧ ಹಲವರು ಖಂಡನೆ ವ್ಯಕ್ತಪಡಿಸಿದ್ದಾರೆ.

ಅಫ್ಗನ್ ವಿದೇಶಾಂಗ ಸಚಿವ ಅಮೀರ್ ಖಾನ್ ಮುತ್ತಕಿ ಅವರ ಭಾರತ ಭೇಟಿ ಬೆನ್ನಲ್ಲೇ ಪಾಕಿಸ್ತಾನ​ ಕಾಬೂಲ್ ಮೇಲೆ ವೈಮಾನಿಕ ದಾಳಿ ನಡೆಸಿತ್ತು. ಈ ದಾಳಿಗೆ ಪ್ರತೀಕಾರವಾಗಿ ಅಫ್ಗಾನಿಸ್ತಾನ ಡುರಾಂಡ್ ಲೈನ್ ಬಾರ್ಡರ್​​ನಲ್ಲಿ 12 ಪಾಕಿಸ್ತಾನ ಸೈನಿಕರನ್ನು ಹತ್ಯೆ ಮಾಡಿದ್ದರು. ಇದೀಗ ಮತ್ತೊಮ್ಮೆ ಪಾಕ್ ಸೇನೆಯು ಗಡಿ ಭಾಗದಲ್ಲಿ ದಾಳಿ ನಡೆಸಿದ್ದು, ಈ ದಾಳಿಯಿಂದಾಗಿ ಅಫ್ಘಾನಿಸ್ತಾನದ ಮೂವರು ಕ್ರಿಕೆಟಿಗರು ಮೃತಪಟ್ಟಿದ್ದಾರೆ.

ಈ ನಡುವೆ ಪಾಕಿಸ್ತಾನದಿಂದ ದಿಂದ 14 ಲಕ್ಷಕ್ಕೂ ಹೆಚ್ಚಿನ ಅಫ್ಗನ್ ನಿರಾಶ್ರಿತರನ್ನು ವಾಪಸು ಕಳುಹಿಸಲಾಗಿದೆ ಎಂದು ಶುಕ್ರವಾರ ಸರ್ಕಾರ ಹೇಳಿದೆ. ಇನ್ನೂ ದೇಶದಲ್ಲೇ ಉಳಿದಿರುವವರಿಗೆ ಸಮಯಾವಕಾಶದ ವಿಸ್ತರಣೆ ನೀಡಲಾಗುವುದಿಲ್ಲ. ಅವರು ಕೂಡ ವಾಪಸಾಗುವುದನ್ನು ಖಚಿತಪಡಿಸಲಾಗುವುದು ಎಂದು ಅದು ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.