ADVERTISEMENT

ಇಮ್ರಾನ್‌ ಮಧ್ಯಂತರ ಜಾಮೀನು ಅವಧಿ 20ರ ವರೆಗೆ ವಿಸ್ತರಣೆ

ಪಿಟಿಐ
Published 12 ಸೆಪ್ಟೆಂಬರ್ 2022, 13:54 IST
Last Updated 12 ಸೆಪ್ಟೆಂಬರ್ 2022, 13:54 IST
ಇಮ್ರಾನ್‌ ಖಾನ್‌
ಇಮ್ರಾನ್‌ ಖಾನ್‌   

ಇಸ್ಲಾಮಾಬಾದ್‌: ಭಯೋತ್ಪಾದನೆ ಪ್ರಕರಣಕ್ಕೆ ಸಂಬಂಧಿಸಿ ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್‌ ಖಾನ್‌ ಅವರ ಮಧ್ಯಂತರ ಜಾಮೀನು ಅವಧಿಯನ್ನು ಸೆಪ್ಟೆಂಬರ್‌ 20ರ ವರೆಗೆ ಇಲ್ಲಿನ ಭಯೋತ್ಪಾದನೆ ನಿಗ್ರಹ ನ್ಯಾಯಾಲಯ ವಿಸ್ತರಿಸಿದೆ.

ಕಳೆದ ತಿಂಗಳು ನಡೆದ ರ‍್ಯಾಲಿಯ ವೇಳೆ ಪೊಲೀಸ್‌, ನ್ಯಾಯಾಂಗ ಮತ್ತು ಸರ್ಕಾರದ ಇತರ ಸಂಸ್ಥೆಗಳಿಗೆ ಬೆದರಿಕೆಯೊಡ್ಡಿದ್ದ ಆರೋಪವನ್ನುಇಮ್ರಾನ್‌ ಅವರು ಎದುರಿಸುತ್ತಿದ್ದಾರೆ. ಹೀಗಾಗಿ ಅವರ ವಿರುದ್ಧ ಭಯೋತ್ಪಾದನೆ ಪ್ರಕರಣ ದಾಖಲಿಸಲಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT