ADVERTISEMENT

ಪಂಜಾಬ್ ಪ್ರಾಂತ್ಯದ ಚುನಾವಣೆ: ಆದೇಶ ಮರುಪರಿಶೀಲನೆಗೆ ಸುಪ್ರೀಂ ಕೋರ್ಟ್‌ಗೆ ಮನವಿ

ಪಿಟಿಐ
Published 19 ಏಪ್ರಿಲ್ 2023, 11:42 IST
Last Updated 19 ಏಪ್ರಿಲ್ 2023, 11:42 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಇಸ್ಲಾಮಾಬಾದ್‌: ಪಂಜಾಬ್ ಪ್ರಾಂತ್ಯದ ವಿಧಾನಸಭೆ ಚುನಾವಣೆಯನ್ನು ಮೇ 14ರಂದು ನಡೆಸುವಂತೆ ನೀಡಿರುವ ತೀರ್ಪನ್ನು ಪುನರ್‌ ಪರಿಶೀಲಿಸಬೇಕು ಎಂದು ಅಧಿಕಾರಿಗಳು ಸುಪ್ರೀಂ ಕೋರ್ಟ್‌ಗೆ ಮನವಿ ಮಾಡಿದ್ದಾರೆ. ಭದ್ರತೆ ಮತ್ತು ಆರ್ಥಿಕ ಕಾರಣಗಳನ್ನು ಉಲ್ಲೇಖಿಸಿ ನ್ಯಾಯಾಲಯಕ್ಕೆ ಈ ಮನವಿ ಮಾಡಲಾಗಿದೆ.

ಮೇ 14ರಂದು ಚುನಾವಣೆ ನಡೆಸಬೇಕು ಎಂದು ಈ ತಿಂಗಳ 4ರಂದು ನ್ಯಾಯಾಲಯ ತೀರ್ಪು ನೀಡಿತ್ತು. ಅಲ್ಲದೆ ಚುನಾವಣೆ ನಡೆಸಲು ಅಗತ್ಯವಿರುವ ಹಣವನ್ನು ಚುನಾವಣಾ ಆಯೋಗಕ್ಕೆ ಬಿಡುಗಡೆ ಮಾಡುವಂತೆ ಸರ್ಕಾರಕ್ಕೆ ಸೂಚಿಸಿತ್ತು. ಆದರೆ, ಗಡುವು ಮೀರಿದರೂ ಸರ್ಕಾರ ಆಯೋಗಕ್ಕೆ ಹಣ ಬಿಡುಗಡೆ ಮಾಡಿಲ್ಲ.

ಭದ್ರತೆ ಮತ್ತು ಆರ್ಥಿಕ ಕಾರಣಗಳನ್ನು ಮುಂದಿಟ್ಟಿರುವ ಸರ್ಕಾರವು ಸುಪ್ರೀಂ ಕೋರ್ಟ್ ತೀರ್ಪು ಪಾಲನೆಗೆ ನಿರಾಕರಿಸಿದೆ. ರಕ್ಷಣಾ ಸಚಿವಾಲಯವು ಮರುಪರಿಶೀಲಿಸುವಂತೆ ನ್ಯಾಯಾಲಯವನ್ನು ಕೋರಿದೆ ಎಂದು ಡಾನ್‌ ದಿನಪತ್ರಿಕೆ ವರದಿ ಮಾಡಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.