ADVERTISEMENT

ಹಿಂಸಾಚಾರ: 8 ಪ್ರಕರಣಗಳಲ್ಲಿ ಇಮ್ರಾನ್ ಖಾನ್‌ಗೆ ಜಾಮೀನು

ಪಿಟಿಐ
Published 23 ಮೇ 2023, 14:47 IST
Last Updated 23 ಮೇ 2023, 14:47 IST
ಇಮ್ರಾನ್ ಖಾನ್‌
ಇಮ್ರಾನ್ ಖಾನ್‌    

ಇಸ್ಲಾಮಾಬಾದ್: ನ್ಯಾಯಾಂಗ ಸಂಕೀರ್ಣದಲ್ಲಿನ ಹಿಂಸಾಚಾರಕ್ಕೆ ಸಂಬಂಧಿಸಿದ ಎಂಟು ಪ್ರಕರಣಗಳಲ್ಲಿ ಪಾಕಿಸ್ತಾನದ ಭಯೋತ್ಪಾದನಾ ನಿಗ್ರಹ ನ್ಯಾಯಾಲಯ (ಎಟಿಸಿ) ಮಂಗಳವಾರ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರಿಗೆ ಜೂನ್ 8ರವರೆಗೆ ಜಾಮೀನು ನೀಡಿದೆ.

ದುಬಾರಿ ಉಡುಗೊರೆಗಳನ್ನು ಲಾಭಕ್ಕಾಗಿ ಮಾರಾಟ ಮಾಡಿದ ‘ತೋಶಾಖಾನಾ’ ಭ್ರಷ್ಟಾಚಾರ ಪ್ರಕರಣದ ವಿಚಾರಣೆಗೆ ಮಾರ್ಚ್ 18 ರಂದು ಇಮ್ರಾನ್ ಅವರು ನ್ಯಾಯಾಲಯಕ್ಕೆ ಹಾಜರಾದ ವೇಳೆ ಪೊಲೀಸರು ಮತ್ತು ಅವರ ಬೆಂಬಲಿಗರ ನಡುವೆ ಘರ್ಷಣೆ ನಡೆದಿತ್ತು. ಘರ್ಷಣೆಯಲ್ಲಿ 25 ಕ್ಕೂ ಹೆಚ್ಚು ಭದ್ರತಾ ಸಿಬ್ಬಂದಿ ಗಾಯಗೊಂಡಿದ್ದರು.

ನಂತರ ಖಾನ್ ವಿರುದ್ಧ ಇಸ್ಲಾಮಾಬಾದ್‌ನ ವಿವಿಧ ಪೊಲೀಸ್ ಠಾಣೆಗಳಲ್ಲಿ ಪ್ರಕರಣಗಳು ದಾಖಲಿಸಲಾಗಿತ್ತು.

ADVERTISEMENT

ಇಮ್ರಾನ್ ಖಾನ್ ಬೆಳಿಗ್ಗೆ ನ್ಯಾಯಾಧೀಶರ ಎದುರು ಹಾಜರಾದರು. ವಕೀಲರ ವಾದ–ಪ್ರತಿವಾದ ಆಲಿಸಿದ ನಂತರ ನ್ಯಾಯಾಲಯ ಜೂನ್ 8 ರವರೆಗೆ ಅವರಿಗೆ ಜಾಮೀನು ನೀಡಿದೆ ಎಂದು ಪಾಕಿಸ್ತಾನ್ ತೆಹ್ರೀಕ್-ಇ-ಇನ್ಸಾಫ್ (ಪಿಟಿಐ) ಪಕ್ಷ ಹೇಳಿಕೆಯಲ್ಲಿ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.