ADVERTISEMENT

‘ಪ್ರತಿಯೊಬ್ಬರ ಹಕ್ಕುಗಳನ್ನು ರಕ್ಷಿಸಲಾಗುವುದು. ಇದು ಪಾಕಿಸ್ತಾನ, ಭಾರತವಲ್ಲ’

ಪಿಟಿಐ
Published 18 ಫೆಬ್ರುವರಿ 2020, 3:14 IST
Last Updated 18 ಫೆಬ್ರುವರಿ 2020, 3:14 IST
   

ಇಸ್ಲಾಮಾಬಾದ್: ‘ಪ್ರತಿಯೊಬ್ಬರ ಸಾಂವಿಧಾನಿಕ ಹಕ್ಕುಗಳನ್ನು ರಕ್ಷಿಸಲಾಗುವುದು. ಇದು ಪಾಕಿಸ್ತಾನ, ಭಾರತವಲ್ಲ’ ಎಂದು ಪಾಕಿಸ್ತಾನದ ಮುಖ್ಯ ನ್ಯಾಯಮೂರ್ತಿ ಅಥರ್‌ ಮಿನ್ಹಾಲ್ಲ ಹೇಳಿದ್ದಾರೆ.

ಪಾಕಿಸ್ತಾನದ ಸೇನಾಡಳಿತವನ್ನು ಕಟುವಾಗಿ ಟೀಕಿಸಿದ್ದ ಸಾಮಾಜಿಕ ಕಾರ್ಯಕರ್ತ ಪಸ್ತೂನ್ ಅವರ ಬಂಧನ ವಿರೋಧಿಸಿ, 23 ಪ್ರತಿಭಟನಕಾರರ ವಿರುದ್ಧ ದಾಖಲಾಗಿದ್ದ ಪ್ರಕರಣದ ವಿಚಾರಣೆ ವೇಳೆ ನ್ಯಾಯಮೂರ್ತಿಗಳು ಹೀಗೆ ಹೇಳಿದ್ದಾರೆ.

‘ಪ್ರಜಾಪ್ರಭುತ್ವ ಸರ್ಕಾರವು ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ತಡೆಯುತ್ತದೆ ಎಂಬುದನ್ನು ನಾವು ನಿರೀಕ್ಷಿಸುವುದಿಲ್ಲ. ಚುನಾಯಿತ ಸರ್ಕಾರವು ಅಭಿವ್ಯಕ್ತಿ ಸ್ವಾತಂತ್ರ್ಯದ ಮೇಲೆ ನಿರ್ಬಂಧ ಹೇರಲು ಸಾಧ್ಯವಿಲ್ಲ. ನಾವು ಟೀಕೆಗೆ ಹೆದರಬಾರದು. ನೀವು ಪ್ರತಿಭಟಿಸಲು ಬಯಸಿದರೆ ಸರ್ಕಾರದ ಅನುಮತಿ ಪಡೆಯಿರಿ. ಅನುಮತಿ ಸಿಗದಿದ್ದರೆ, ನಿಮಗೆ ನ್ಯಾಯಾಲಯವಿದೆ. ನ್ಯಾಯಾಲಯಗಳು ಜನರ ಸಾಂವಿಧಾನಿಕ ಹಕ್ಕುಗಳನ್ನು ರಕ್ಷಿಸುತ್ತದೆ’ ಎಂದು ನ್ಯಾಯಮೂರ್ತಿ ಹೇಳಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.