ಇಸ್ಲಾಮಾಬಾದ್: ಪಾಕಿಸ್ತಾನದ ಪ್ರಧಾನಿ ಇಮ್ರಾನ್ ಖಾನ್ ವಿರುದ್ಧ ಸ್ವಪಕ್ಷೀಯರು ಸೇರಿದಂತೆ ಪ್ರತಿಪಕ್ಷಗಳ ಸದಸ್ಯರು ಸಲ್ಲಿಸಿದಅವಿಶ್ವಾಸ ನಿರ್ಣಯದ ಮೇಲಿನ ಚರ್ಚೆಗಾಗಿ ಇದೇ 25 ರಂದು ಸಂಸತ್ತಿನ ಅಧಿವೇಶನ ಕರೆಯಲಾಗಿದೆ.
2018ರಲ್ಲಿ ದೇಶದ ಪ್ರಧಾನಿಯಾಗಿ ಅಧಿಕಾರ ವಹಿಸಿಕೊಂಡ ಇಮ್ರಾನ್ ಅವರು ಈ ಪರಿಯಾದ ಸವಾಲುಗಳನ್ನು ಇದೇ ಮೊದಲ ಬಾರಿಗೆ ಎದುರಿಸುತ್ತಿದ್ದಾರೆ.
ಪ್ರಧಾನಿ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸಂಸತ್ತಿನ ಕೆಳಮನೆ ಅನುಮೋದಿಸಿದ್ದಲ್ಲಿ, 3 ರಿಂದ 7 ದಿನಗಳ ಒಳಗೆ ಮತದಾನ ನಡೆಯಲಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.