ಇಸ್ಲಾಮಾಬಾದ್: ಪಾಕಿಸ್ತಾನದ ಪ್ರಧಾನಿ ಇಮ್ರಾನ್ ಖಾನ್ ವಿರುದ್ಧ ಅವಿಶ್ವಾಸ ನಿರ್ಣಯದ ಮೇಲಿನ ಚರ್ಚೆ ಆರಂಭವಾಗಬೇಕಿರುವ ನಡುವೆಯೇ, ಇಮ್ರಾನ್ ಖಾನ್ ಅವರು ದೇಶದ ಭದ್ರತೆ ವಿಚಾರಗಳ ಕುರಿತ ಚರ್ಚೆಗಾಗಿ ಗುರುವಾರ ರಾಷ್ಟ್ರೀಯ ಭದ್ರತಾ ಸಮಿತಿಯ (ಎನ್‌ಎಸ್‌ಸಿ) ಸಭೆ ಕರೆದಿದ್ದಾರೆ.
ಇಮ್ರಾನ್ ಖಾನ್ ವಿರುದ್ಧದ ಅವಿಶ್ವಾಸ ನಿರ್ಣಯದ ಮೇಲಿನ ಚರ್ಚೆಗೆ ಗುರುವಾರ ಚಾಲನೆ ಸಿಕ್ಕಿದೆ.
ಪ್ರಧಾನಿಯವರ ನಿವಾಸದಲ್ಲಿಎನ್‌ಎಸ್‌ಸಿ ಸಭೆ ನಡೆಯಲಿದ್ದು, ಈ ಸಭೆಯ ನೇತೃತ್ವವನ್ನು ಇಮ್ರಾನ್ ಖಾನ್ ಅವರು ವಹಿಸಲಿದ್ದಾರೆ. ಅಲ್ಲದೆ ಸೇನಾಪಡೆಗಳ ಮುಖ್ಯಸ್ಥರು, ಪ್ರಮುಖ ಸಚಿವರು, ರಾಷ್ಟ್ರೀಯ ಭದ್ರತಾ ಸಲಹೆಗಾರ ಹಾಗೂ ಗುಪ್ತಚರ ಇಲಾಖೆಯ ಹಿರಿಯ ಅಧಿಕಾರಿಗಳು ಈ ಮಹತ್ವದ ಸಭೆಯಲ್ಲಿ ಭಾಗವಹಿಸಲಿದ್ದಾರೆ ಎಂದು ಮಾಹಿತಿ ಸಚಿವ ಫವಾದ್ ಚೌಧರಿ ಟ್ವೀಟ್ ಮಾಡಿದ್ದಾರೆ.
ತಮ್ಮನ್ನು ಅಧಿಕಾರದಿಂದ ಕೆಳಗಿಳಿಸಲು 'ವಿದೇಶಿ ಪಿತೂರಿ' ನಡೆದಿದೆ ಎಂದು ಆರೋಪಿಸಿದ್ದ ಇಮ್ರಾನ್, ಇದೀಗ ಈ ಮಹತ್ವದ ಸಭೆ ಕರೆದಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.