ADVERTISEMENT

Pakistan | ಇಮ್ರಾನ್‌ ಖಾನ್‌ರಿಂದ 500 ಮಿಲಿಯನ್‌ ಪಿಕೆಆರ್‌ ನಷ್ಟ

ಪಿಟಿಐ
Published 18 ಜೂನ್ 2025, 12:40 IST
Last Updated 18 ಜೂನ್ 2025, 12:40 IST
ಇಮ್ರಾನ್ ಖಾನ್
ಇಮ್ರಾನ್ ಖಾನ್   

ಲಾಹೋರ್: ಜೈಲಿನಲ್ಲಿರುವ ಮಾಜಿ ಪ್ರಧಾನಿ ಇಮ್ರಾನ್‌ ಖಾನ್‌ ಮತ್ತು ಅವರ ಪಕ್ಷದ ಕಾರ್ಯಕರ್ತರು ಎರಡು ವರ್ಷಗಳ ಹಿಂದೆ ಇಲ್ಲಿನ ಹಿರಿಯ ಸೇನಾ ಅಧಿಕಾರಿಗಳ ನಿವಾಸಗಳ ಮೇಲೆ ದಾಳಿ ಮಾಡಿ ನಡೆಸಿದ ಹಿಂಸಾಚಾರದಿಂದ ಸರ್ಕಾರಕ್ಕೆ 500 ಮಿಲಿಯನ್ ಪಾಕಿಸ್ತಾನ ರೂಪಾಯಿಯಷ್ಟು ನಷ್ಟ ಉಂಟಾಗಿದೆ ಎಂದು ಪೊಲೀಸರು ಆರೋಪಿಸಿದ್ದಾರೆ.

ಪಾಕಿಸ್ತಾನ್ ತೆಹ್ರೀಕ್–ಎ–ಇನ್ಸಾಫ್‌(ಪಿಟಿಐ) ಪಕ್ಷದ ಸಂಸ್ಥಾಪಕ ಇಮ್ರಾನ್ ಖಾನ್‌ ವಿರುದ್ಧ 2023ರ ಮೇ 9ರಂದು ವಿವಿಧ ಪ್ರಕರಣಗಳನ್ನು ದಾಖಲಿಸಲಾಗಿತ್ತು. ಎಂಟು ಪ್ರಕರಣಗಳಲ್ಲಿ ಜಾಮೀನು ಕೋರಿ ಲಾಹೋರ್‌ ಹೈಕೋರ್ಟ್‌ಗೆ ಇಮ್ರಾನ್‌ ಖಾನ್‌ ಸಲ್ಲಿಸಿದ್ದ ಅರ್ಜಿ ವಿಚಾರಣೆ ವೇಳೆ, ಫಿರ್ಯಾದಿದಾರರು ನಷ್ಟದ ಮಾಹಿತಿ ನೀಡಿದ್ದಾರೆ.

2023 ಆಗಸ್ಟ್‌ನಿಂದ ಇಮ್ರಾನ್ ಖಾನ್‌, ಭ್ರಷ್ಟಾಚಾರ ಹಾಗೂ ಭಯೋತ್ಪದಾನೆ ಸೇರಿ ಹಲವು ಪ್ರಕರಣಗಳಲ್ಲಿ ಜೈಲಿನಲ್ಲಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.