ADVERTISEMENT

ಎಲ್ಲ ಸಮಸ್ಯೆಗಳ ಕುರಿತು ಭಾರತದ ಜತೆ ಮಾತುಕತೆಗೆ ಸಿದ್ಧ: ಪಾಕ್‌

ಪಿಟಿಐ
Published 22 ಆಗಸ್ಟ್ 2025, 20:20 IST
Last Updated 22 ಆಗಸ್ಟ್ 2025, 20:20 IST
ಇಶಾಕ್‌ ಡಾರ್‌
ಇಶಾಕ್‌ ಡಾರ್‌   

ಇಸ್ಲಾಮಾಬಾದ್‌: ಕಾಶ್ಮೀರ ಮತ್ತು ಬಾಕಿ ಉಳಿದಿರುವ ಎಲ್ಲ ಸಮಸ್ಯೆಗಳ ಕುರಿತು ಭಾರತದೊಂದಿಗೆ ಮಾತುಕತೆ ನಡೆಸಲುಸಿದ್ಧ  ಎಂದು ಪಾಕಿಸ್ತಾನ ವಿದೇಶಾಂಗ ಸಚಿವ ಇಶಾಕ್‌ ಡಾರ್‌ ಅವರು ಶುಕ್ರವಾರ ತಿಳಿಸಿದ್ದಾರೆ.

ಮಾತುಕತೆ ಯಾವಾಗ ನಡೆದರೂ ಕಾಶ್ಮೀರ ಸಮಸ್ಯೆ ಮಾತ್ರವಲ್ಲದೆ ಎಲ್ಲ ವಿಷಯಗಳ ಕುರಿತು ಚರ್ಚೆ ನಡೆಸಲಾಗುವುದು ಎಂದು ಡಾರ್‌ ಸುದ್ದಿಗಾರರಿಗೆ ತಿಳಿಸಿದ್ದಾರೆ. 

ಪಾಕಿಸ್ತಾನ ಆಕ್ರಮಿತ ಕಾಶ್ಮೀರ ಮರಳಿ ಪಡೆಯುವ ಮತ್ತು ಭಯೋತ್ಪಾದನೆ ವಿಚಾರವಾಗಿ ಮಾತ್ರ ಪಾಕಿಸ್ತಾನದೊಂದಿಗೆ ಮಾತುಕತೆ ನಡೆಸುವುದಾಗಿ ಭಾರತ ಸ್ಪಷ್ಟವಾಗಿ ತಿಳಿಸಿದೆ. ಆದರೆ, ಕೇವಲ ಒಂದು ವಿಚಾರ ಅಥವಾ ಕಾರ್ಯಸೂಚಿ ಕುರಿತು ಭಾರತದೊಂದಿಗೆ ಪಾಕಿಸ್ತಾನ ಮಾತುಕತೆ ನಡೆಸುವುದಿಲ್ಲ ಎಂದು ಪಾಕಿಸ್ತಾನ ಪದೇ ಪದೇ ಹೇಳಿದೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.