ADVERTISEMENT

ಬಲೂಚಿಸ್ತಾನದಲ್ಲಿ 11 ಐಸಿಸ್ ಉಗ್ರರ ಹತ್ಯೆ

ಪಿಟಿಐ
Published 31 ಆಗಸ್ಟ್ 2021, 12:23 IST
Last Updated 31 ಆಗಸ್ಟ್ 2021, 12:23 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ಕರಾಚಿ: ದೇಶದ ಬಲೂಚಿಸ್ತಾನ ಪ್ರಾಂತ್ಯದಲ್ಲಿ ಇಸ್ಲಾಮಿಕ್ ಸ್ಟೇಟ್ (ಐಎಸ್‌) ಭಯೋತ್ಪಾದಕರ ಗುಂಪಿಗೆ ಸೇರಿದ 11 ಉಗ್ರರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನದ ಭಯೋತ್ಪಾದನಾ ನಿಗ್ರಹ ಅಧಿಕಾರಿಗಳು ಮಂಗಳವಾರ ತಿಳಿಸಿದರು.

ಬಲೂಚಿಸ್ತಾನ ಪ್ರಾಂತ್ಯದ ಮಸ್ತುಂಗ್ ಜಿಲ್ಲೆಯ ಕಾಂಪೌಂಡ್‌ನಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಐಎಸ್‌ ಉಗ್ರರನ್ನು ಹತ್ಯೆ ಮಾಡಲಾಗಿದೆ. ಇದಕ್ಕೂ ಮೊದಲು ಉಗ್ರರಿಗೆ ಶರಣಾಗುವಂತೆ ಕೇಳಲಾಯಿತು. ಆದರೆ, ಅವರು ಭಯೋತ್ಪಾದನಾ ನಿಗ್ರಹ ವಿಭಾಗದ ಪೊಲೀಸರ ಮೇಲೆ ಗುಂಡು ಹಾರಿಸಿದರು. ಪ್ರತಿ ದಾಳಿ ನಡೆಸಿದಾಗ 11 ಮಂದಿ ಉಗ್ರರು ಸಾವನ್ನಪ್ಪಿದರು ಎಂದು ಅಧಿಕಾರಿಯೊಬ್ಬರು ಹೇಳಿದರು.

ಅಫ್ಘಾನಿಸ್ತಾನದ ಮೇಲೆಆಗಸ್ಟ್ 15ರಂದು ತಾಲಿಬಾನ್ ಹಿಡಿತ ಸಾಧಿಸಿದ ನಂತರ ಈ ಭಾಗದಲ್ಲಿ ಉಗ್ರರ ಚಟುವಟಿಕೆ ಹೆಚ್ಚಾಗಿದೆ ಎಂದು ಅವರು ಹೇಳಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.