ADVERTISEMENT

ಮುಷರಫ್ ಶರಣಾದ ಬಳಿಕವೇ ಅರ್ಜಿ ಪರಿಗಣನೆ: ಸುಪ್ರೀಂ ಕೋರ್ಟ್

​ಪ್ರಜಾವಾಣಿ ವಾರ್ತೆ
Published 18 ಜನವರಿ 2020, 20:00 IST
Last Updated 18 ಜನವರಿ 2020, 20:00 IST
ಪರ್ವೇಜ್ ಮುಷರಫ್
ಪರ್ವೇಜ್ ಮುಷರಫ್   

ಇಸ್ಲಾಮಾಬಾದ್: ‘ಗಲ್ಲುಶಿಕ್ಷೆಗೆ ಗುರಿಯಾಗಿರುವ ಪಾಕಿಸ್ತಾನದ ಮಾಜಿ ಅಧ್ಯಕ್ಷ ಪರ್ವೇಜ್ ಮುಷರಫ್ ಅವರು ಶರಣಾದ ಬಳಿಕವಷ್ಟೆ, ಅವರು ತಮ್ಮ ಶಿಕ್ಷೆ ಪ್ರಶ್ನಿಸಿ ಸಲ್ಲಿಸಿರುವ ಅರ್ಜಿ ಪರಿಗಣಿಸಲಾಗುವುದು’ ಎಂದು ಪಾಕಿಸ್ತಾನದ ಸುಪ್ರೀಂ ಕೋರ್ಟ್ ಹೇಳಿದೆ.

ಈ ಕುರಿತು ಶನಿವಾರ ದಿ ಎಕ್ಸ್‌ಪ್ರೆಸ್ ಟ್ರಿಬ್ಯೂನ್ ವರದಿ ಮಾಡಿದೆ.

‘ಕಾನೂನಿಗೆ ಶರಣಾಗದೆ ಅವರು ಶಿಕ್ಷೆ ವಿರೋಧಿಸಿ ಮೇಲ್ಮನವಿ ಸಲ್ಲಿಸಲು ಅವಕಾಶವಿಲ್ಲ’ ಎಂದು ಸುಪ್ರೀಂ ಕೋರ್ಟ್ ಅವರ ಅರ್ಜಿಯನ್ನು ತಿರಸ್ಕರಿಸಿದೆ.

ADVERTISEMENT

ಗಲ್ಲುಶಿಕ್ಷೆ ಪ್ರಶ್ನಿಸಿ ಮುಷರಫ್ ಗುರುವಾರ ತಮ್ಮ ವಕೀಲರ ಮೂಲಕ ಅರ್ಜಿ ಸಲ್ಲಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.