ADVERTISEMENT

ಅಪ್ರಚೋದಿತ ದಾಳಿ: ಪಾಕ್‌ ಖಂಡನೆ

ಭಾರತದ ಅಧಿಕಾರಿಯನ್ನು ಕರೆಸಿ ಪ್ರತಿಭಟನೆ ದಾಖಲು

​ಪ್ರಜಾವಾಣಿ ವಾರ್ತೆ
Published 13 ಸೆಪ್ಟೆಂಬರ್ 2020, 12:24 IST
Last Updated 13 ಸೆಪ್ಟೆಂಬರ್ 2020, 12:24 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಇಸ್ಲಾಮಾಬಾದ್: ಗಡಿ ನಿಯಂತ್ರಣ ರೇಖೆಯಲ್ಲಿ ಅಪ್ರಚೋದಿತ ಗುಂಡಿನ ದಾಳಿ ನಡೆಸಲಾಗುತ್ತಿದೆ ಎಂದು ಆರೋಪಿಸಿರುವ ಪಾಕಿಸ್ತಾನ, ಭಾರತದ ಹೈಕಮಿಷನ್‌ ಕಚೇರಿಯ ಹಿರಿಯ ರಾಜತಾಂತ್ರಿಕ ಅಧಿಕಾರಿಯನ್ನು ಕರೆಯಿಸಿ ಭಾನುವಾರ ಪ್ರತಿಭಟನೆ ದಾಖಲಿಸಿದೆ.

ಪಾಕ್‌ ನಾಗರಿಕರನ್ನು ಗುರಿಯಾಗಿಸಿಕೊಂಡು ನಿರಂತರ ದಾಳಿ ನಡೆಸಲಾಗುತ್ತಿದೆ. ಶನಿವಾರ ಭಾರತೀಯ ಪಡೆಗಳು ರಾಚಿಕಿರಿ ವಲಯಗಳಲ್ಲಿ ನಡೆಸಿದ ಅಪ್ರಚೋದಿತ ಗುಂಡಿನ ದಾಳಿಯಿಂದ ಒಬ್ಬ ಬಾಲಕಿ ಮೃತಪಟ್ಟಿದ್ದು, ನಾಲ್ವರು ಗಂಭೀರ ಗಾಯಗೊಂಡಿದ್ದಾರೆ ಎಂದು ಪಾಕ್‌ ವಿದೇಶಾಂಗ ಕಚೇರಿ ತಿಳಿಸಿದೆ.

ಈ ವರ್ಷ ಭಾರತ 2,225 ಬಾರಿ ಕದನವಿರಾಮ ಉಲ್ಲಂಘಿಸಿದ್ದು, 18 ಮಂದಿ ಸತ್ತಿದ್ದಾರೆ. 176 ಮಂದಿ ಗಂಭೀರ ಗಾಯಗೊಂಡಿದ್ದಾರೆ ಎಂದು ಆರೋಪಿಸಿದೆ.

ADVERTISEMENT

2003ರ ಕದನ ವಿರಾಮ ಒಪ್ಪಂದವನ್ನು ಗೌರವಿಸಬೇಕು. ಮೇಲಿಂದ ಮೇಲೆ ನಡೆಯುತ್ತಿರುವ ಅಪ್ರಚೋದಿತ ಗುಂಡಿನ ದಾಳಿಯ ಬಗ್ಗೆ ತನಿಖೆ ನಡೆಸಬೇಕು ಎಂದು ವಿದೇಶಾಂಗ ಕಚೇರಿ ಒತ್ತಾಯಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.