ಇಸ್ಲಾಮಾಬಾದ್: ಗಡಿ ನಿಯಂತ್ರಣ ರೇಖೆಯಲ್ಲಿ (ಎಲ್‌ಒಸಿ)ಅಪ್ರಚೋದಿತ ಗುಂಡಿನ ದಾಳಿ ನಡೆಸಲಾಗುತ್ತಿದೆ ಎಂದು ಆರೋಪಿಸಿರುವ ಪಾಕಿಸ್ತಾನವು ಭಾರತದ ಹಿರಿಯ ರಾಯಭಾರಿ ಅಧಿಕಾರಿಯನ್ನು ಕರೆಯಿಸಿ ಪ್ರತಿಭಟನೆ ದಾಖಲಿಸಿದೆ.
ಸೋಮವಾರ ಭಾರತೀಯ ಪಡೆಗಳು ಬಾಗ್ಸರ್ ವಲಯಗಳಲ್ಲಿ ಕದನ ವಿರಾಮ ಉಲ್ಲಂಘಿಸಿದ್ದು, ಇದರಿಂದ ಆರು ನಾಗರಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಪಾಕ್ ವಿದೇಶಾಂಗ ಕಚೇರಿ ತಿಳಿಸಿದೆ.
‘ಪಾಕ್ ನಾಗರಿಕರನ್ನು ಗುರಿಯಾಗಿಸಿಕೊಂಡು ಭಾರತನಿರಂತರವಾಗಿ ದಾಳಿ ನಡೆಸುತ್ತಿದ್ದು,ಈ ವರ್ಷ 957 ಬಾರಿ ಕದನವಿರಾಮ ಉಲ್ಲಂಘಿಸಿದೆ’ ಎಂದು ಪಾಕ್ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.