(ಸಾಂದರ್ಭಿಕ ಚಿತ್ರ)
ಇಸ್ಲಾಮಾಬಾದ್: ಪಾಕಿಸ್ತಾನ ಹಾಗೂ ಅಫ್ಗಾನಿಸ್ತಾನದ ಗಡಿಯಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದ್ದು, ಘರ್ಷಣೆ ಉಂಟಾಗಿದೆ ಎಂದು ವರದಿಯಾಗಿದೆ.
ಶನಿವಾರ ತಡರಾತ್ರಿ ಪಾಕಿಸ್ತಾನ ಹಾಗೂ ಅಫ್ಗಾನಿಸ್ತಾನ ಪಡೆಗಳ ನಡುವೆ ಗುಂಡಿನ ಚಕಮಕಿ ನಡೆದಿದೆ.
ಅಫ್ಗಾನಿಸ್ತಾನದ ರಾಜಧಾನಿ ಕಾಬೂಲ್ ಮೇಲೆ ಪಾಕಿಸ್ತಾನ ವೈಮಾನಿಕ ದಾಳಿ ನಡೆಸಿತ್ತು. ಇದಕ್ಕೆ ಪ್ರತಿಯಾಗಿ ಪಾಕಿಸ್ತಾನದ ಪೋಸ್ಟ್ ಮೇಲೆ ಅಫ್ಗಾನ್ ತಾಲಿಬಾನ್ ಗುಂಡಿನ ದಾಳಿ ನಡೆಸಿದೆ ಎಂದು ತಿಳಿದು ಬಂದಿದೆ.
ಅಫ್ಗಾನಿಸ್ತಾನದ ಕಡೆಯಿಂದ ಉಂಟಾಗಿರುವ ಅಪ್ರಚೋದಿತ ದಾಳಿಗೆ ತಕ್ಕ ಪ್ರತ್ಯುತ್ತರ ನೀಡುತ್ತಿರುವುದಾಗಿ ಪಾಕಿಸ್ತಾನ ಭದ್ರತಾ ಪಡೆಯ ಅಧಿಕಾರಿಗಳು ತಿಳಿಸಿದ್ದಾರೆ.
ಅಫ್ಗಾನ್‌ಗೆ ತಿರುಗೇಟು ನೀಡುತ್ತಿರುವ ವಿಡಿಯೊ ದೃಶ್ಯವನ್ನು ಪಾಕಿಸ್ತಾನದ ಭದ್ರತಾ ಅಧಿಕಾರಿಗಳು ಬಿಡುಗಡೆ ಮಾಡಿದ್ದಾರೆ. ಗಡಿಯುದ್ಧಕ್ಕೂ ಆರಕ್ಕೂ ಹೆಚ್ಚು ಜಾಗಗಳಲ್ಲಿ ಗುಂಡಿನ ಚಕಮಕಿ ನಡೆದಿದೆ ಎಂದು ಅವರು ಹೇಳಿದ್ದಾರೆ.
'ವಾಯುಪ್ರದೇಶ ಉಲ್ಲಂಘಿಸಿದ್ದಕ್ಕೆ ಪಾಕ್ ವಿರುದ್ಧ ಕಾರ್ಯಾಚರಣೆ ನಡೆಸಲಾಗಿದೆ. ಮಗದೊಮ್ಮ ಪಾಕಿಸ್ತಾನ ನಿಯಮ ಉಲ್ಲಂಘಿಸಿದರೆ ನಮ್ಮ ವಾಯುಪ್ರದೇಶವನ್ನು ರಕ್ಷಿಸಲು ಸೇನೆ ಸಿದ್ಧವಾಗಿದೆ' ಎಂದು ಅಫ್ಗಾನಿಸ್ತಾನ ರಕ್ಷಣಾ ಸಚಿವಾಲಯದ ವಕ್ತಾರ ಇನಾಯತುಲ್ಲಾ ಖೋವಾರಾಜ್ಮಿ ಎಚ್ಚರಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.