ADVERTISEMENT

ಪಾಕ್‌–ಅಫ್ಗನ್‌ ಗಡಿಯಲ್ಲಿ ಬೇಲಿ ಅಳವಡಿಸಲು ಸಮ್ಮತಿ

ಪಿಟಿಐ
Published 25 ಡಿಸೆಂಬರ್ 2021, 11:28 IST
Last Updated 25 ಡಿಸೆಂಬರ್ 2021, 11:28 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಇಸ್ಲಾಮಾಬಾದ್: ಪಾಕಿಸ್ತಾನ ಮತ್ತು ಅಫ್ಗಾನಿಸ್ತಾನ ಗಡಿಯುದ್ದಕ್ಕೂ ಬೇಲಿ ಅಳವಡಿಸಲು ಉಭಯ ದೇಶಗಳು ಸಮ್ಮತಿಸಿದ್ದು, ಈ ಮೂಲಕ ವಿವಾದಕ್ಕೆ ತೆರೆ ಎಳೆದಿವೆ. ಗಡಿ ವಿಷಯವು ಉಭಯ ದೇಶಗಳ ನಡುವೆ ತಿಕ್ಕಾಟಕ್ಕೂ ಕಾರಣವಾಗಿತ್ತು.

ಸುದ್ದಿಗಾರರ ಜೊತೆ ಮಾತನಾಡಿದ ಪಾಕ್‌ನ ಹಿರಿಯ ಅಧಿಕಾರಿಯೊಬ್ಬರು, ಬೇಲಿ ಅಳವಡಿಸುವ ಕುರಿತಂತೆ ಅಧಿಕಾರಿಗಳ ಹಂತದಲ್ಲಿಯೇ ಚರ್ಚಿಸಿ ತೀರ್ಮಾನಿಸಲಾಗಿದೆ ಎಂದು ಹೇಳಿದರು. ಆದರೆ, ಅಧಿಕಾರಿಗಳ ಯಾವ ಹಂತದಲ್ಲಿ ಚರ್ಚೆಯಾಯಿತು ಎಂದು ಬಹಿರಂಗಪಡಿಸಿಲ್ಲ.

ಬುಧವಾರ ಗಡಿಯಲ್ಲಿ ಉಭಯ ದೇಶಗಳ ಸಿಬ್ಬಂದಿ ನಡುವೆ ವಾಗ್ವಾದ ನಡೆದಿತ್ತು.ತಾಲಿಬಾನ್‌ನ ರಕ್ಷಣಾ ಸಚಿವ ಮುಲ್ಲಾ ಯಾಕೂಬ್ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಸ್ಥಿತಿ ಶಮನಗೊಳಿಸಿದ್ದರು. ವಿವಾದವನ್ನು ಸೌಹಾರ್ದ ಮತ್ತು ಶಾಂತವಾಗಿ ಬಗೆಹರಿಸಲಾಗಿದೆ ಎಂದೂ ತಿಳಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.