ಇಸ್ಲಮಾಬಾದ್: ಪಾಕಿಸ್ತಾನದ ಶರ್ಕಾಟ್ ಎಂಬಲ್ಲಿವಾಯು ಸೇನೆಯ ಯುದ್ಧ ವಿಮಾನ ಅಪಘಾತಕ್ಕೀಡಾಗಿ ಬೆಂಕಿಗೆ ಅಹುತಿಯಾಗಿರುವ ಘಟನೆ ಶುಕ್ರವಾರ ವರದಿಯಾಗಿದೆ.
ಘಟನೆಯಲ್ಲಿ ನಾಗರಿಕರಿಗೆ ಯಾವುದೇ ಹಾನಿಯಾಗಿಲ್ಲ. ಮೀರಜ್ ಯುದ್ಧವಿಮಾನದಲ್ಲಿ ಸೇನಾಧಿಕಾರಿಗಳು ಪ್ರತಿನಿತ್ಯದಂತೆ ಹಾರಾಟ ನಡೆಸುತ್ತಿದ್ದಾಗ ಎಂಜಿನ್‌ನಲ್ಲಿ ಬೆಂಕಿ ಕಾಣಿಸಿಕೊಂಡಿತು. ನಂತರ ಜಮೀನಿನಮೇಲೆ ಬಿದ್ದು ಸುಟ್ಟು ಕರಕಲಾಯಿತು.ಈ ಅಪಘಾತ ಸಂಭವಿಸಿದ ಕೂಡಲೆ ಸೇನಾಧಿಕಾರಿಗಳು ಸ್ಥಳಕ್ಕೆ ಧಾವಿಸಿ ತನಿಖೆ ಮುಂದುವರಿದಿದೆಎಂದು ಪಾಕಿಸ್ತಾನ ಸೇನಾ ಮೂಲಗಳು ತಿಳಿಸಿವೆ.
ಘಟನೆಯಲ್ಲಿ ಯಾವುದೇ ಆಸ್ತಿ ಹಾನಿ ಅಥವಾ ಪ್ರಾಣಹಾನಿ ಸಂಭವಿಸಿಲ್ಲ ಎಂದು ಎಎನ್ ಐ ಸುದ್ದಿ ಸಂಸ್ಥೆ ವರದಿ ಮಾಡಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.