ಕಾಬುಲ್: ಅಫ್ಗಾನಿಸ್ತಾನ ಮತ್ತು ಪಾಕಿಸ್ತಾನದ ನಡುವೆ ನಡೆಯುತ್ತಿರುವ ಸಂಘರ್ಷ ಮತ್ತಷ್ಟು ತೀವ್ರಗೊಂಡಿದ್ದು, ಅಫ್ಗಾನಿಸ್ತಾನದ ಕಂದಹಾರ್ ಮೇಲೆ ಪಾಕಿಸ್ತಾನ ವಾಯುದಾಳಿ ನಡೆಸಿದೆ. ಈ ದಾಳಿಯಲ್ಲಿ ಹಲವು ಮಂದಿ ಸಾವಿಗೀಡಾಗಿದ್ದಾರೆ ಎಂದು ವರದಿ ತಿಳಿಸಿದೆ.
ಪಾಕಿಸ್ತಾನ ಬುಧವಾರ ಅಫ್ಗಾನಿಸ್ತಾನದ ಕಂದಹಾರ್ ಪ್ರಾಂತ್ಯದಲ್ಲಿ ವಾಯುದಾಳಿ ನಡೆಸಿದೆ ಎಂದು ಅಫ್ಗಾನ್ ಮತ್ತು ಪಾಕಿಸ್ತಾನ ಅಧಿಕಾರಿಗಳು ಖಚಿತಪಡಿಸಿದ್ದಾರೆ.
ಮಂಗಳವಾರ ಅಫ್ಗಾನ್ ಮತ್ತು ಪಾಕಿಸ್ತಾನ ಪಡೆಗಳ ನಡುವೆ ನಡೆದ ಘರ್ಷಣೆಯಲ್ಲಿ ಅಫ್ಗಾನಿಸ್ತಾನದಲ್ಲಿ 12ಕ್ಕೂ ಹೆಚ್ಚು ನಾಗರಿಕರು ಸಾವಿಗೀಡಾಗಿದ್ದಾರೆ ಎಂದು ವರದಿಯಾಗಿತ್ತು. ಆದರೆ, ಬುಧವಾರ ಮಧ್ಯಾಹ್ನದ ವರದಿ ಪ್ರಕಾರ ಪಾಕಿಸ್ತಾನಿ ಸೇನೆಯು ಕನಿಷ್ಠ 40 ಮಂದಿ ಅಫ್ಗಾನಿಸ್ತಾನದ ತಾಲಿಬಾನ್ ದಾಳಿಕೋರರನ್ನು ಕೊಂದಿದೆ ಎಂದು ವರದಿಯಾಗಿದೆ.
ಪಾಕಿಸ್ತಾನದಲ್ಲಿ ದಾಳಿಗಳನ್ನು ಹೆಚ್ಚಿಸಿರುವ ಭಯೋತ್ಪಾದಕರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಅಫ್ಗಾನಿಸ್ತಾನದ ತಾಲಿಬಾನ್ ಸರ್ಕಾರವನ್ನು ಪಾಕಿಸ್ತಾನ ಒತ್ತಾಯಿಸಿತ್ತು. ಅಫ್ಗಾನಿಸ್ತಾನದಿಂದಲೇ ಉಗ್ರರು ಕಾರ್ಯಾಚರಿಸುತ್ತಿದ್ದಾರೆ ಎಂದು ಪಾಕಿಸ್ತಾನ ಹೇಳಿತ್ತು. ಅದಾದ ಬಳಿಕ ಈ ಬೆಳವಣಿಗೆ ನಡೆದಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.