
ಪ್ರಜಾವಾಣಿ ವಾರ್ತೆ
ಕಾಬೂಲ್: ಅಫ್ಗಾನಿಸ್ತಾನದ ಮೂರು ಪ್ರಾಂತ್ಯಗಳ ಮೇಲೆ ಪಾಕಿಸ್ತಾನವು ವೈಮಾನಿಕ ದಾಳಿ ನಡೆಸಿದ್ದು, 10 ಜನ ಮೃತಪಟ್ಟಿದ್ದಾರೆ ಎಂದು ತಾಲಿಬಾನ್ ಸರ್ಕಾರ ಮಂಗಳವಾರ ಆರೋಪಿಸಿದೆ.
ಖೋಸ್ಟ್ ಪ್ರಾಂತ್ಯದಲ್ಲಿರುವ ನಾಗರಿಕರೊಬ್ಬರ ಮನೆ ಮೇಲೆ ಪಾಕಿಸ್ತಾನ ದಾಳಿ ಮಾಡಿದ್ದು, ಒಂಬತ್ತು ಮಕ್ಕಳು ಮತ್ತು ಒಬ್ಬ ಮಹಿಳೆ ಮೃತಪಟ್ಟಿದ್ದಾರೆ. ಕುನಾರ್ ಮತ್ತು ಪಕ್ತಿಯಾ ಪ್ರಾಂತ್ಯಗಳ ಮೇಲೆಯೂ ಪಾಕಿಸ್ತಾನ ದಾಳಿ ನಡೆಸಿದ್ದು, ನಾಲ್ವರು ಗಾಯಗೊಂಡಿದ್ದಾರೆ ಎಂದು ಅಫ್ಗಾನಿಸ್ತಾನದ ತಾಲಿಬಾನ್ ಸರ್ಕಾರದ ವಕ್ತಾರ ಜಬಿವುಲ್ಲಾ ಮುಜಾಹಿದ್ ಅವರು ತಿಳಿಸಿದ್ದಾರೆ.
ಅಫ್ಗಾನಿಸ್ತಾನದ ಆರೋಪದ ಕುರಿತು ಪಾಕಿಸ್ತಾನ ಸೇನೆ ಮತ್ತು ಸರ್ಕಾರ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.