ADVERTISEMENT

ಅಫ್ಗನ್‌ ಉಗ್ರರ ತಾಣಗಳ ಮೇಲೆ ಪಾಕ್ ದಾಳಿ

ಏಜೆನ್ಸೀಸ್
Published 22 ಫೆಬ್ರುವರಿ 2026, 15:48 IST
Last Updated 22 ಫೆಬ್ರುವರಿ 2026, 15:48 IST
<div class="paragraphs"><p>ಸಾಂದರ್ಭಿಕ ಚಿತ್ರ</p></div>

ಸಾಂದರ್ಭಿಕ ಚಿತ್ರ

   

ಇಸ್ಲಾಮಾಬಾದ್: ದೇಶದಲ್ಲಿ ಇತ್ತೀಚೆಗೆ ನಡೆ‌ದ ಬಂಡುಕೋರರ ದಾಳಿಗೆ ಪ್ರತೀಕಾರವಾಗಿ ಅಫ್ಗಾನಿಸ್ತಾನದ ಕನಿಷ್ಠ ಏಳು ಭಯೋತ್ಪಾದಕ ಅಡಗುತಾಣಗಳ ಮೇಲೆ ವಾಯುದಾಳಿ ನಡೆಸಿರುವುದಾಗಿ ಪಾಕಿಸ್ತಾನ ಭಾನುವಾರ ಹೇಳಿದೆ.

ನಾಗರಿಕ ಮತ್ತು ದಾರ್ಮಿಕ ಕೇಂದ್ರವನ್ನು ಗುರಿಯಾಗಿಸಿ ನಡೆಸಲಾದ ಈ ದಾಳಿಗೆ ತಕ್ಕ ಪ್ರತ್ಯುತ್ತರ ನೀಡುವುದಾಗಿ ಅಫ್ಗನ್ ಸರ್ಕಾರ ಎಚ್ಚರಿಸಿದೆ. ದಾಳಿಯಲ್ಲಿ ಮಕ್ಕಳು ಸೇರಿದಂತೆ ಡಜನ್‌ಗಟ್ಟಲೆ ಜನರು ಮೃತಪಟ್ಟಿದ್ದಾರೆ ಎಂದು ಅದು ತಿಳಿಸಿದೆ.

ADVERTISEMENT

ಪಾಕಿಸ್ತಾನದ ಖೈಬರ್‌ ಪಖ್ತುಂಖ್ವಾ ಪ್ರಾಂತ್ಯದ ಬನ್ನು ಪ್ರದೇಶದಲ್ಲಿ ಶನಿವಾರ ನಡೆದ ಆತ್ಮಾಹುತಿ ದಾಳಿಯಲ್ಲಿ ಲೆಫ್ಟಿನೆಂಟ್ ಕರ್ನಲ್ ಮತ್ತು ಒಬ್ಬ ಸೈನಿಕ ಮೃತಪಟ್ಟಿದ್ದರು. ಈ ದಾಳಿಯನ್ನು ಅಫ್ಗಾನಿಸ್ತಾನ ಮೂಲದ ಭಯೋತ್ಪಾದಕ ನಾಯಕರ ನಿರ್ದೇಶನದಂತೆ ನಡೆಸಲಾಗಿದೆ ಎಂದು ಪಾಕಿಸ್ತಾನ ಹೇಳಿದೆ.

‘ಭಯೋತ್ಪಾದಕ ಚಟುವಟಿಕೆಗಳಿಗೆ ಅಫ್ಗನ್ ನೆಲವನ್ನು ಬಳಸುವುದನ್ನು ತಡೆಯುವಂತೆ ಪದೇ ಪದೇ ಕೇಳಿಕೊಂಡರೂ, ತಾಲಿಬಾನ್ ಸರ್ಕಾರ ಅದನ್ನು ನಿಗ್ರಹಿಸುವಲ್ಲಿ ವಿಫಲವಾಗಿದೆ. ಹಾಗಾಗಿ, ಪಾ‌ಕ್–ಅಫ್ಗನ್ ಗಡಿ ಪ್ರದೇಶದಲ್ಲಿರುವ ತಹ್ರಿಕ್ ಇ ತಾಲಿಬಾನ್ ಪಾಕಿಸ್ತಾನ್ ಮತ್ತು ಅದರ ಅಂಗ ಸಂಸ್ಥೆಗಳು ಹಾಗೂ ಇಸ್ಲಾಮಿಕ್ ಸ್ಟೇಟ್ ಆಫ್ ಖೊರಸಾನ್ ಪ್ರಾವಿನ್ಸ್‌ನ ಭಯೋತ್ಪಾದಕ ಶಿಬಿರಗಳು ಮತ್ತು ಅಡಗುತಾಣಗಳ ಮೇಲೆ ಗುಪ್ತಚರ ಆಧಾರಿತ ನಿಖರ ವಾಯುದಾಳಿಗಳನ್ನು ನಡೆಸಲಾಗಿದೆ’ ಎಂದು ಪಾಕಿಸ್ತಾನ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.