ಇಸ್ಲಾಮಾಬಾದ್: ಭಾರತದೊಂದಿಗಿನ ನಾಲ್ಕು ದಿನಗಳ ಸಂಘರ್ಷದ ಬಳಿಕ ಪಾಕಿಸ್ತಾನದ ಸೇನಾ ಮುಖ್ಯಸ್ಥ ಆಸಿಂ ಮುನೀರ್ ಅವರು ಅಮೆರಿಕಕ್ಕೆ ಎರಡನೇ ಬಾರಿಗೆ ಭೇಟಿ ನೀಡಿದ್ದಾರೆ ಎಂದು ಪಾಕಿಸ್ತಾನ ಸೇನೆಯು ಭಾನುವಾರ ಹೇಳಿದೆ.
‘ಆಸಿಂ ಅವರು ಅಮೆರಿಕಕ್ಕೆ ಅಧಿಕೃತವಾಗಿ ಭೇಟಿ ನೀಡಿದ್ದು, ಅಲ್ಲಿನ ರಾಜಕೀಯ ನಾಯಕರು ಮತ್ತು ಸೇನೆಯ ಮುಖ್ಯಸ್ಥರನ್ನು ಭೇಟಿ ಮಾಡಲಿದ್ದಾರೆ. ಪಾಕಿಸ್ತಾನದ ವಲಸಿಗರೊಂದಿಗೂ ಮಾತುಕತೆ ನಡೆಸಲಿದ್ದಾರೆ’ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.
ಅಮೆರಿಕದ ಸೆಂಟ್ರಲ್ ಕಮಾಂಡ್ ಕಮಾಂಡರ್ ಜನರಲ್ ಮೈಕೆಲ್ ಇ. ಕುರಿಲ್ಲಾ ಅವರ ನಿವೃತ್ತಿಯ ಬೀಳ್ಕೊಡುಗೆ ಸಮಾರಂಭದಲ್ಲಿ ಭಾಗಿಯಾಗಿದ್ದ ಆಸಿಂ, ದ್ವಿಪಕ್ಷೀಯ ಮಿಲಿಟರಿ ಸಹಕಾರ ಬಲಪಡಿಸಲು ಕುರಿಲ್ಲಾ ನೀಡಿದ್ದ ಕೊಡುಗೆಯನ್ನು ಸ್ಮರಿಸಿದರು. ಇದೇ ವೇಳೆ ಅಡ್ಮಿರಲ್ ಬ್ರಾಡ್ ಕೂಪರ್‌ಗೆ ಶುಭ ಕೋರುವ ಜೊತೆಗೆ ಭದ್ರತಾ ಸವಾಲುಗಳನ್ನು ಎದುರಿಸುವಲ್ಲಿ ಸಹಯೋಗ ಮುಂದುವರಿಸುವ ವಿಶ್ವಾಸ ವ್ಯಕ್ತಪಡಿಸಿದರು ಎಂದಿದೆ.
ಅಮೆರಿಕ ಸೇನಾ ಪಡೆಯ ಜಂಟಿ ಮುಖ್ಯಸ್ಥ ಜನರಲ್ ಡಾನ್ ಕೇನ್ ಅವರನ್ನು ಭೇಟಿ ಮಾಡಿ ಚರ್ಚಿಸಿದ ಮುನೀರ್ ಅವರು, ಪಾಕಿಸ್ತಾನಕ್ಕೆ ಭೇಟಿ ನೀಡುವಂತೆ ಕೇನ್ ಅವರಿಗೆ ಆಹ್ವಾನ ನೀಡಿದರು ಎಂದು ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.