ಇಸ್ಲಾಮಾಬಾದ್: ಪಾಕಿಸ್ತಾನವು ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದು, ಸೇನಾ ಮುಖ್ಯಸ್ಥ ಜನರಲ್ ಆಸಿಂ ಮುನೀರ್ ಅವರು ಸೌದಿ ಅರೇಬಿಯಾ ಮತ್ತು ಯುಎಇಗಳಿಗೆ ತುರ್ತು ಭೇಟಿ ಆರಂಭಿಸಿದ್ದಾರೆ.
ಪಾಕಿಸ್ತಾನ ಈ ಶ್ರೀಮಂತ ಗಲ್ಫ್ ದೇಶಗಳಿಂದ ತುರ್ತು ಆರ್ಥಿಕ ನೆರವಿನ ನಿರೀಕ್ಷೆಯಲ್ಲಿದ್ದು, ಜನರಲ್ ಮುನೀರ್ ಅವರು ಒಂದು ವಾರ ಈ ಎರಡೂ ದೇಶಗಳಲ್ಲಿ ಉನ್ನತ ನಾಯಕರೊಂದಿಗೆ ಮಾತುಕತೆ ನಡೆಸಲಿದ್ದಾರೆ.
ಇದಕ್ಕೂ ಮೊದಲು ಪ್ರಧಾನಿ ಶೆಹಬಾಝ್ ಷರೀಫ್ ಸಹ ಸೌದಿ ಅರೇಬಿಯಾ ಮತ್ತು ಯುಎಇಗೆ ಭೇಟಿ ನೀಡಿ, ನೆರವು ಕೋರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.