ADVERTISEMENT

ಖೈಬರ್ ಪಖ್ತುಂಖ್ವಾ ಪ್ರಾಂತ್ಯದಲ್ಲಿ 22 ಭಯೋತ್ಪಾದಕರನ್ನು ಹತ್ಯೆ ಮಾಡಿದ ಪಾಕ್ ಸೇನೆ

ಪಿಟಿಐ
Published 25 ನವೆಂಬರ್ 2025, 14:30 IST
Last Updated 25 ನವೆಂಬರ್ 2025, 14:30 IST
ಪಾಕಿಸ್ತಾನಿ ಭದ್ರತಾ ಸಿಬ್ಬಂದಿ (ಎಎಫ್‌ಪಿ)
ಪಾಕಿಸ್ತಾನಿ ಭದ್ರತಾ ಸಿಬ್ಬಂದಿ (ಎಎಫ್‌ಪಿ)   

ಪೇಶಾವರ: ವಾಯವ್ಯ ಖೈಬರ್ ಪಖ್ತುಂಖ್ವಾ ಪ್ರಾಂತ್ಯದಲ್ಲಿ ಪಾಕಿಸ್ತಾನದ ಭದ್ರತಾ ಪಡೆಗಳು ನಡೆಸಿದ ಕಾರ್ಯಾಚರಣೆಯಲ್ಲಿ ನಿಷೇಧಿತ ತೆಹ್ರೀಕ್–ಎ–ತಾಲಿಬಾನ್ ಪಾಕಿಸ್ತಾನಕ್ಕೆ (ಟಿಟಿಪಿ) ಸೇರಿದ 22 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಸೇನೆಯ ಮಾಧ್ಯಮ ವಿಭಾಗ ಮಂಗಳವಾರ ತಿಳಿಸಿದೆ.

ಉತ್ತರ ವಜೀರಿಸ್ತಾನದ ಗಡಿಯಲ್ಲಿರುವ ಬನ್ನೂ ಜಿಲ್ಲೆಯಲ್ಲಿ ಭಯೋತ್ಪಾದಕರು ಇರುವ ಬಗ್ಗೆ ಗುಪ್ತಚರ ವರದಿಯ ಆಧಾರದ ಮೇಲೆ ಭದ್ರತಾ ಪಡೆಗಳು ಸೋಮವಾರ ಕಾರ್ಯಾಚರಣೆ ನಡೆಸಿವೆ ಎಂದು ‘ಇಂಟರ್ ಸರ್ವಿಸಸ್ ಪಬ್ಲಿಕ್ ರಿಲೇಶನ್ಸ್’ ಬಿಡುಗಡೆ ಮಾಡಿದ ಹೇಳಿಕೆಯಲ್ಲಿ ತಿಳಿಸಿದೆ.

ಈ ಪ್ರದೇಶದಲ್ಲಿರುವ ಎಲ್ಲಾ ಭಯೋತ್ಪಾದಕರನ್ನು ನಿರ್ಮೂಲನೆ ಮಾಡಲು ಶುದ್ಧೀಕರಣ ಕಾರ್ಯಾಚರಣೆ ನಡೆಸಲಾಗುತ್ತಿದೆ ಎಂದು ಅದು ಹೇಳಿದೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.