ಪೆಶಾವರ: ವಾಯವ್ಯ ಭಾಗದ ಖೈಬರ್ ಪಂಖ್ತುಖ್ವಾ ಪ್ರಾಂತ್ಯದ ಒರಕ್‌ಝೈ ಜಿಲ್ಲೆಯಲ್ಲಿ ಈ ವಾರ ನಡೆಸಿದ ಸರಣಿ ‘ಪ್ರತೀಕಾರ ಕಾರ್ಯಾಚರಣೆ’ಗಳಲ್ಲಿ ತೆಹ್ರೀಕ್–ಎ–ತಾಲಿಬಾನ್ ಪಾಕಿಸ್ತಾನ (ಟಿಟಿಪಿ) ಸಂಘಟನೆಯ 30 ಉಗ್ರರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನ ಸೇನೆ ಶುಕ್ರವಾರ ಹೇಳಿದೆ.
ಲೆಫ್ಟಿನೆಂಟ್ ಕರ್ನಲ್ ಹಾಗೂ ಮೇಜರ್ ಸೇರಿ 11 ಯೋಧರನ್ನು ಇತ್ತೀಚೆಗೆ ಟಿಟಿಪಿ ಕೊಂದಿತ್ತು. ಇದಕ್ಕೆ ಪ್ರತೀಕಾರವಾಗಿ ಸೇನೆಯು ಈ ಕಾರ್ಯಾಚರಣೆಗಳನ್ನು ಕೈಗೊಂಡಿತ್ತು.
ಜಿಲ್ಲೆಯಲ್ಲಿ ಅಕ್ಟೋಬರ್ 7ರಂದು ಉಗ್ರರು ದಾಳಿ ನಡೆಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.