ಪೆಶಾವರ: ಭದ್ರತೆಗೆ ಬೆದರಿಕೆಯ ಕಾರಣದಿಂದ ಅಫ್ಗಾನಿಸ್ತಾನದೊಂದಿಗಿನ ಪ್ರಮುಖ ಗಡಿಯನ್ನು ಮುಂದಿನ ಸೂಚನೆವರೆಗೆ ಮುಚ್ಚಲಾಗಿದೆ ಎಂದು ಪಾಕಿಸ್ತಾನ ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ.
ಖೈಬರ್ ಪಂಖ್ತುಖ್ವಾ ಪ್ರಾಂತ್ಯದ ಉತ್ತರ ವಜೀರಿಸ್ತಾನ ಜಿಲ್ಲೆಯ ಗುಲಾಮ್ ಖಾನ್ ಗಡಿಯಲ್ಲಿ ಶನಿವಾರ ಆತ್ಮಾಹುತಿ ಬಾಂಬ್ ದಾಳಿ ನಡೆದಿತ್ತು. ಇದರ ಬೆನ್ನಲ್ಲೇ, ಅಫ್ಗಾನಿಸ್ತಾನಕ್ಕೆ ಹೊಂದಿಕೊಂಡಿರುವ ಗಡಿಯನ್ನು ಮುಚ್ಚಲಾಗಿದೆ ಎಂದು ಭದ್ರತಾ ಪಡೆಗಳ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಈ ಆತ್ಮಾಹುತಿ ಬಾಂಬ್ ದಾಳಿಯಲ್ಲಿ 13 ಜನ ಭದ್ರತಾ ಸಿಬ್ಬಂದಿ ಮೃತಪಟ್ಟು, ಇತರ ಮೂವರು ಗಾಯಗೊಂಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.