ಇಸ್ಲಾಮಾಬಾದ್: ಕಳೆದ ವರ್ಷ ಮೇ 9ರಂದು ನಡೆದಿದ್ದ ಹಿಂಸಾಚಾರಕ್ಕೆ ಸಂಬಂಧಿಸಿದ ಎರಡು ಪ್ರಕರಣಗಳಲ್ಲಿ ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರನ್ನು ಅಲ್ಲಿಯ ಕೋರ್ಟೊಂದು ಸಾಕ್ಷ್ಯಗಳ ಕೊರತೆಯ ಕಾರಣದಿಂದಾಗಿ ಈಚೆಗೆ ಖುಲಾಸೆಗೊಳಿಸಿದೆ.
ಪಾಕಿಸ್ತಾನ್–ಎ–ಇಸ್ಸಾಫ್ (ಪಿಟಿಐ) ಪಕ್ಷದ ಸಂಸ್ಥಾಪಕರೂ ಆದ ಇಮ್ರಾನ್ ಖಾನ್ ಅವರ ಬಂಬಲಿಗರು ಸಾರ್ವಜನಿಕ ಸ್ವತ್ತುಗಳಿಗೆ ಹಾನಿ ಮಾಡಿದ್ದರು. ಜೊತೆಗೆ, ಸ್ಥಳದಲ್ಲಿ ಜಮಾವಣೆಗೊಂಡಿದ್ದ ಸೇನಾ ತುಕಡಿಗಳಿಗೂ ತೊಂದರೆ ಉಂಟುಮಾಡಿದ್ದರು. ಈ ಘಟನೆಗೆ ಸಂಬಂಧಿಸಿದಂತೆ ಶೆಹಜಾದ್ ಟೌನ್ ಪೊಲೀಸ್ ಠಾಣೆಯಲ್ಲಿ ಎರಡು ಪ್ರತ್ಯೇಕ ದೂರುಗಳು ದಾಖಲಾಗಿದ್ದವು. ಈ ದೂರುಗಳನ್ನು ಪ್ರಶ್ನಿಸಿ ಇಮ್ರಾನ್ ಅವರು ಅರ್ಜಿ ಸಲ್ಲಿಸಿದ್ದರು.
ಅರ್ಜಿ ವಿಚಾರಣೆ ನಡೆಸಿದ್ದ ನ್ಯಾಯಾಂಗ ಮ್ಯಾಜಿಸ್ಟ್ರೇಟ್ ಸಾಹಿಬ್ ಬಿಲಾಲ್ ಅವರು ಈ ಆದೇಶ ಹೊರಡಿಸಿದ್ದಾರೆ.
ಸದ್ಯ ಇಮ್ರಾನ್ ಖಾನ್ ಅವರು ರಾವಲ್ಪಿಂಡಿಯ ಅಡಿಡಾಲ್ ಜೈಲಿನಲ್ಲಿದ್ದಾರೆ. ಅವರು ಬಂಧನಕ್ಕೊಳಗಾದ ವೇಳೆ ಆಕ್ರೋಶಭರಿತರಾದ ಬೆಂಬಲಿಗರು ಹಲವಾರು ಸಾರ್ವಜನಿಕ ಸ್ವತ್ತುಗಳಿಗೆ ಹಾನಿಯುಂಟು ಮಾಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.