ADVERTISEMENT

ಇಮ್ರಾನ್, ಖುರೇಷಿ ವಿರುದ್ಧ ದೋಷಾರೋಪಣೆ ಅ.23ಕ್ಕೆ ಮುಂದೂಡಿಕೆ

ಪಿಟಿಐ
Published 17 ಅಕ್ಟೋಬರ್ 2023, 13:40 IST
Last Updated 17 ಅಕ್ಟೋಬರ್ 2023, 13:40 IST
ಇಮ್ರಾನ್ ಖಾನ್
ಇಮ್ರಾನ್ ಖಾನ್   

ಇಸ್ಲಾಮಾಬಾದ್: ದೇಶದ ರಹಸ್ಯ ಕಾನೂನುಗಳನ್ನು ಉಲ್ಲಂಘಿಸಿದ ಆರೋಪಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಹಾಗೂ ಅವರ ಆಪ್ತ ಶಾ ಮಹಮ್ಮದ್ ಖುರೇಷಿ ಅವರ ವಿರುದ್ಧದ ದೋಷಾರೋಪಣೆಯನ್ನು ಪಾಕಿಸ್ತಾನದ ವಿಶೇಷ ನ್ಯಾಯಾಲಯವು ಮಂಗಳವಾರ ಅಕ್ಟೋಬರ್ 23ಕ್ಕೆ ಮುಂದೂಡಿದೆ. 

ಕಳೆದ ವರ್ಷದ ಏಪ್ರಿಲ್‌ನಲ್ಲಿ ತಮ್ಮನ್ನು ಅಧಿಕಾರದಿಂದ ಕೆಳಗಿಳಿಸಿದ ತಮ್ಮ ವಿರೋಧಿಗಳನ್ನು ಟೀಕಿಸಲು ಪಿಟಿಐ ಮುಖ್ಯಸ್ಥ ಇಮ್ರಾನ್ ಖಾನ್ ಅವರು ರಹಸ್ಯ ದಾಖಲಾತಿಗಳನ್ನು ಬಳಸಿಕೊಂಡ ಆರೋಪಕ್ಕೆ ಸಂಬಂಧಿಸಿದ ಪ್ರಕರಣ ಇದಾಗಿದೆ. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT