ADVERTISEMENT

ತೋಷಖಾನಾ ಪ್ರಕರಣ: ಇಮ್ರಾನ್, ಪತ್ನಿ ವಿರುದ್ಧ ಆರೋಪ ಹೊರಿಸಿದ ಪಾಕ್‌ ಕೋರ್ಟ್‌

ಪಿಟಿಐ
Published 12 ಡಿಸೆಂಬರ್ 2024, 12:24 IST
Last Updated 12 ಡಿಸೆಂಬರ್ 2024, 12:24 IST
ಇಮ್ರಾನ್‌ ಖಾನ್
ಇಮ್ರಾನ್‌ ಖಾನ್   

ಇಸ್ಲಾಮಾಬಾದ್: ತೋಷಖಾನಾ ಪ್ರಕರಣದಲ್ಲಿ ಮಾಜಿ ಪ್ರಧಾನಿ ಇಮ್ರಾನ್‌ ಖಾನ್‌ ಹಾಗೂ ಅವರ ಪತ್ನಿ ಬುಶ್ರಾ ಬೀಬಿ ವಿರುದ್ಧ ಪಾಕಿಸ್ತಾನದ ನ್ಯಾಯಾಲಯ ಆರೋಪ ಹೊರಿಸಿದೆ.

ರಾವಲ್ಪಿಂಡಿಯ ಅಡಿಯಾಲಾ ಜೈಲಿನಲ್ಲಿ ನಡೆದ ವಿಚಾರಣೆ ವೇಳೆ, ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಶಾರುಕ್ ಅರ್ಜುಮಂದ್ ಅವರು ಈ ಇಬ್ಬರ ವಿರುದ್ಧ ಆರೋಪ ಹೊರಿಸಿದರು.

ವಿದೇಶಿ ಗಣ್ಯರು ನೀಡಿದ್ದ ಉಡುಗೊರೆಗಳನ್ನು ದುಬಾರಿ ಬೆಲೆಗೆ ಮಾರಾಟ ಮಾಡಿ, ಭ್ರಷ್ಟಾಚಾರ ಎಸಗಿದ ಆರೋಪವನ್ನು ಇಮ್ರಾನ್‌ ಖಾನ್‌ ಹಾಗೂ ಪತ್ನಿ ಬುಶ್ರಾ ಬೀಬಿ ಎದುರಿಸುತ್ತಿದ್ದಾರೆ. ಇದನ್ನು ತೋಷಖಾನಾ ಪ್ರಕರಣ ಎಂದೇ ಕರೆಯಲಾಗುತ್ತದೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.