ADVERTISEMENT

ಪಾಕಿಸ್ತಾನ: ಉಗ್ರರ ಅಡಗುದಾಣಗಳ ಮೇಲೆ ದಾಳಿ; 12 ಸಾವು

ಪಿಟಿಐ
Published 30 ಮಾರ್ಚ್ 2025, 2:40 IST
Last Updated 30 ಮಾರ್ಚ್ 2025, 2:40 IST
<div class="paragraphs"><p>ಪಾಕಿಸ್ತಾನ: ಉಗ್ರರ ಅಡಗುದಾಣಗಳ ಮೇಲೆ ದಾಳಿ; 12  ಸಾವು</p></div>

ಪಾಕಿಸ್ತಾನ: ಉಗ್ರರ ಅಡಗುದಾಣಗಳ ಮೇಲೆ ದಾಳಿ; 12 ಸಾವು

   

ಪೆಶಾವರ: ಪಾಕಿಸ್ತಾನದ ಖೈಬರ್ ಪಖ್ತುಂಖ್ವಾ ಪ್ರಾಂತ್ಯದಲ್ಲಿದ್ದ ಭಯೋತ್ಪಾದಕರ ಅಡಗುದಾಣಗಳ ಮೇಲೆ ಸೇನೆ ನಡೆಸಿದ ಡ್ರೋನ್ ದಾಳಿಯಲ್ಲಿ 12ಕ್ಕೂ ಅಧಿಕ ಉಗ್ರರು ಹಾಗೂ ಕೆಲವು ನಾಗರಿಕರು ಸಾವಿಗೀಡಾಗಿದ್ದಾರೆ.

ಮರ್ಡನ್ ಜಿಲ್ಲೆಯ ಕಟ್‌ಲಂಗ್ ಎನ್ನುವ ಗುಡ್ಡ ಪ್ರದೇಶದಲ್ಲಿ ಉಗ್ರರ ಅಡಗುದಾಣಗಳನ್ನು ಗುರಿಯಾಗಿಸಿಕೊಂಡು ಶನಿವಾರ ಬೆಳಿಗ್ಗೆ ಉಗ್ರರ ನಿಗ್ರಹ ಕಾರ್ಯಾಚರಣೆ ಆರಂಭಿಸಲಾಗಿತ್ತು ಎಂದು ಪ್ರಾಂತೀಯ ಸರ್ಕಾರ ಬಿಡಗಡೆ ಮಾಡಿದ ಪ್ರಕಟಣೆಯಲ್ಲಿ ತಿಳಿಸಿದೆ.

ADVERTISEMENT

ಕಾರ್ಯಾಚರಣೆಯಲ್ಲಿ ಮಹಿಳೆಯರು ಹಾಗೂ ಮಕ್ಕಳು ಸೇರಿ ನಾಗರಿಕರು ಸಾವಿಗೀಡಾಗಿದ್ದಾರೆ. 12 ಉಗ್ರರು ಮೃತಪಟ್ಟಿದ್ದಾರೆ ಎಂದು ಆಡಳಿತ ತಿಳಿಸಿದೆ.

ಈ ಸ್ಥಳವನ್ನು ಶಸ್ತ್ರಸಜ್ಜಿತ ಉಗ್ರರು ಅಡಗುದಾಣ ಹಾಗೂ ಸಾಗಣೆ ತಾಣವನ್ನಾಗಿ ಮಾಡಿಕೊಂಡಿದ್ದಾರೆ ಎನ್ನುವ ಖಚಿತ ಗುಪ್ತಚರ ಮಾಹಿತಿ ಆಧರಿಸಿ ಕಾರ್ಯಾಚರಣೆ ನಡೆಸಲಾಗಿತ್ತು. ಈ ಪ್ರದೇಶದಲ್ಲಿ ಭಯೋತ್ಪಾದನೆ ಚಟುವಟಿಕೆಗಳಿಗೆ ಪ್ರೇರೇಪಿಸುತ್ತಿದ್ದ ಪ್ರಮುಖರನ್ನು ಕೊಲ್ಲಲಾಗಿದೆ ಎಂದು ಶನಿವಾರ ಬಿಡುಗಡೆ ಮಾಡಿದ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಕಾರ್ಯಾಚರಣೆಯಲ್ಲಿ ನಾಗರಿಕರ ಸಾವು ಖಂಡನಾರ್ಹ ಹಾಗೂ ದುರಂತ ಎಂದು ಖೈಬರ್ ಪಖ್ತುಂಖ್ವಾ ಮುಖ್ಯಮಂತ್ರಿ ಅಲಿ ಅಮಿನ್ ಗಂದಾಪುರ ತಿಳಿಸಿದ್ದಾರೆ.

ಘಟನೆಯಲ್ಲಿ ಗಾಯಗೊಂಡ ನಾಗರಿಕರಿಗೆ ವೈದ್ಯಕೀಯ ಸೌಲಭ್ಯ ನೀಡಲಾಗುತ್ತಿದೆ ಮೃತಪಟ್ಟವರ ಕುಟುಂಬಗಳಿಗೆ ಪರಿಹಾರ ನೀಡಲಾಗುವುದು ಎಂದು ಸರ್ಕಾರ ಹೇಳಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.