ಪ್ರವಾಸಿಗರು ನಾಪತ್ತೆಯಾಗಿರುವ ಸುದ್ದಿ ತಿಳಿದು ಸ್ವಾಟ್ ನದಿ ತೀರದಲ್ಲಿ ಜಮಾಯಿಸಿರುವ ಸ್ಥಳೀಯರು
ರಾಯಿಟರ್ಸ್ ಚಿತ್ರ
ಪೆಶಾವರ: ಪಾಕಿಸ್ತಾನದ ಖೈಬರ್ ಪಖ್ತುಂಖ್ವಾ ಪ್ರಾಂತ್ಯದಲ್ಲಿ ಹರಿಯುವ ಸ್ವಾಟ್ ನದಿಯಲ್ಲಿ ಏಕಾಏಕಿ ಉಂಟಾದ ಪ್ರವಾಹದಿಂದಾಗಿ ಒಂದೇ ಕುಟುಂಬದ ಕನಿಷ್ಠ 18 ಮಂದಿ ಕೊಚ್ಚಿಹೋಗಿರುವ ದುರಂತ ಶುಕ್ರವಾರ ಸಂಭವಿಸಿದೆ.
ನಾಲ್ಕು ಮಂದಿಯ ಶವಗಳು ಪತ್ತೆಯಾಗಿವೆ. ನಾಪತ್ತೆಯಾಗಿರುವ ಉಳಿದವರಿಗಾಗಿ ಶೋಧ ಮುಂದುವರಿದಿದೆ ಎಂದು ರಕ್ಷಣಾ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿರುವ ಅಧಿಕಾರಿಗಳು ತಿಳಿಸಿದ್ದಾರೆ.
'ಐದು ವಿಭಿನ್ನ ಸ್ಥಳಗಳಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದೇವೆ. ತುರ್ತು ರಕ್ಷಣಾ ಸೇವೆಗಳ 80 ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದಾರೆ' ಎಂದು ತುರ್ತು ರಕ್ಷಣಾ ಇಲಾಖೆಯ ಮಹಾನಿರ್ದೇಶಕ ಶಾ ಫಹಾದ್ ತಿಳಿಸಿರುವುದಾಗಿ ಹೇಳಿಕೆ ಬಿಡುಗಡೆಯಾಗಿದೆ.
ಪ್ರಾಥಮಿಕ ಮಾಹಿತಿ ಪ್ರಕಾರ, ಸಂತ್ರಸ್ತ ಕುಟಂಬವು ಈ ಪ್ರದೇಶಕ್ಕೆ ಪ್ರವಾಸಕ್ಕೆ ಬಂದಿತ್ತು. ಮಳೆಯಿಂದಾಗಿ ನದಿಯಲ್ಲಿ ಏಕಾಏಕಿ ಪ್ರವಾಹ ಉಂಟಾಗಿದ್ದರಿಂದ ಅಪಾಯಕ್ಕೆ ಸಿಲುಕಿತ್ತು ಎನ್ನಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.