ADVERTISEMENT

ಇಮ್ರಾನ್‌ ವಿರುದ್ಧ ದೇಶದ್ರೋಹ ಪ್ರಕರಣ: ಪಾಕ್‌ ಸರ್ಕಾರ ಚಿಂತನೆ

ಪಿಟಿಐ
Published 3 ಜೂನ್ 2022, 11:19 IST
Last Updated 3 ಜೂನ್ 2022, 11:19 IST
ಇಮ್ರಾನ್‌ ಖಾನ್
ಇಮ್ರಾನ್‌ ಖಾನ್   

ಇಸ್ಲಾಮಾಬಾದ್‌: ದೇಶದ ಮೇಲೆ ದಾಳಿಗೆ ಸಂಚು ರೂಪಿಸಿದ ಆರೋಪದಡಿ ಮಾಜಿ ಪ‍್ರಧಾನಿ ಇಮ್ರಾನ್‌ ಖಾನ್‌, ಗಿಲ್ಗಿಟ್‌– ಬಾಲ್ಟಿಸ್ತಾನ ಹಾಗೂ ಖೈಬರ್‌ ಪಖ್ತುಂಖ್ವಾ ಪ್ರಾಂತ್ಯಗಳ ಮುಖ್ಯಮಂತ್ರಿಗಳ ವಿರುದ್ಧ ದೇಶದ್ರೋಹ ಪ್ರಕರಣ ದಾಖಲಿಸಲು ಪಾಕಿಸ್ತಾನ ಸರ್ಕಾರ ಚಿಂತನೆ ನಡೆಸಿದೆ.

ಮೇ 25 ರಂದು ಪಾಕಿಸ್ತಾನ್‌ ತೆಹ್ರಿಕ್‌–ಎ–ಇನ್ಸಾಫ್‌ ಪಕ್ಷ ಆಯೋಜಿಸಿದ್ದ ಪ್ರತಿಭಟನಾ ಮೆರವಣಿಗೆ ವೇಳೆ ಗಲಭೆ ನಡೆಯಿತು. ಅದು ಒಕ್ಕೂಟ ವ್ಯವಸ್ಥೆಯ ವಿರುದ್ಧ ಯೋಜಿಸಲಾದ ದಾಳಿಯಾಗಿತ್ತು ಎಂದು ಸರ್ಕಾರ ಆರೋಪಿಸಿದೆ.

ಗುರುವಾರ ಆಂತರಿಕ ವ್ಯವಹಾರಗಳ ಸಚಿವ ರಾಣಾ ಸನಾ ಉಲ್ಲಾ ಖಾನ್‌ ಅವರ ಅಧ್ಯಕ್ಷತೆಯಲ್ಲಿ ನಡೆದ ಸಂಪುಟ ಸಮಿತಿ ಸಭೆಯಲ್ಲಿ ಈ ಬಗ್ಗೆ ಚರ್ಚಿಸಲಾಯಿತು ಎಂದು ಮೂಲಗಳು ಹೇಳಿವೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.