ಖೇಲ್ ದಾಸ್ ಕೊಹಿಸ್ತಾನಿ
(ಚಿತ್ರ ಕೃಪೆ: X/@KesooMalKheealD)
ಇಸ್ಲಾಮಾಬಾದ್: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ ವಿವಾದಾತ್ಮಕ ನೀರಾವರಿ ಕಾಲುವೆ ಯೋಜನೆಗಳನ್ನು ವಿರೋಧಿಸಿ ನಡೆದ ಪ್ರತಿಭಟನೆಯ ವೇಳೆ ಹಿಂದೂ ಸಚಿವರೊಬ್ಬರ ಮೇಲೆ ದಾಳಿ ನಡೆಸಿರುವ ಘಟನೆ ವರದಿಯಾಗಿದೆ.
ಪಾಕಿಸ್ತಾನ ಸರ್ಕಾರದ ಧಾರ್ಮಿಕ ವ್ಯವಹಾರಗಳ ರಾಜ್ಯ ಸಚಿವ ಖೇಲ್ ದಾಸ್ ಕೊಹಿಸ್ತಾನಿ, ಶನಿವಾರ ಥಟ್ಟಾ ಜಿಲ್ಲೆಯಲ್ಲಿ ಪ್ರಯಾಣಿಸುತ್ತಿದ್ದಾಗ ಅವರ ವಾಹನದ ಮೇಲೆ ದಾಳಿ ನಡೆಸಿರುವ ಪ್ರತಿಭಟನಾಕಾರರು ಟೊಮೆಟೊ ಹಾಗೂ ಆಲೂಗಡ್ಡೆಗಳನ್ನು ಎಸೆದಿದ್ದಾರೆ.
ದಾಳಿಯಲ್ಲಿ ಸಚಿವರಿಗೆ ಯಾವುದೇ ಗಾಯವಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಸಚಿವರ ಮೇಲಿನ ದಾಳಿಯನ್ನು ಪಾಕಿಸ್ತಾನದ ಪ್ರಧಾನಿ ಶೆಹಬಾಜ್ ಶರೀಫ್ ತೀವ್ರವಾಗಿ ಖಂಡಿಸಿದ್ದಾರೆ. ಅಲ್ಲದೆ ಈ ಘಟನೆಯ ವಿರುದ್ಧ ತನಿಖೆ ನಡೆಸುವುದಾಗಿ ಭರವಸೆ ನೀಡಿದ್ದಾರೆ.
'ಯಾವುದೇ ಕಾರಣಕ್ಕೂ ಜನಪ್ರತಿನಿಧಿಗಳ ಮೇಲಿನ ದಾಳಿಯನ್ನು ಒಪ್ಪಲು ಸಾಧ್ಯವಿಲ್ಲ. ಇದರಲ್ಲಿ ಭಾಗಿಯಾದವರಿಗೆ ತಕ್ಕ ಶಿಕ್ಷೆಯನ್ನು ನೀಡಲಾಗುವುದು' ಎಂದು ಹೇಳಿದ್ದಾರೆ.
ಕೊಹಿಸ್ತಾನಿ ಆಡಳಿತಾರೂಢ ಪಾಕಿಸ್ತಾನ್ ಮುಸ್ಲೀಂ ಲೀಗ್-ನವಾಜ್ (ಪಿಎಂಎಲ್-ಎನ್) ಪಕ್ಷದ ಪ್ರತಿನಿಧಿಯಾಗಿದ್ದಾರೆ.
ಪ್ರತಿಭಟನಾಕಾರರು ಸರ್ಕಾರದ ವಿರುದ್ಧ ಘೋಷಣೆಯನ್ನು ಕೂಗಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.