ADVERTISEMENT

ಕತ್ತಲಲ್ಲಿ ಮುಳುಗಿದ ಇಡೀ ಪಾಕಿಸ್ತಾನ

ಪಿಟಿಐ
Published 10 ಜನವರಿ 2021, 2:56 IST
Last Updated 10 ಜನವರಿ 2021, 2:56 IST
ಕತ್ತಲು ಆವರಿಸಿದ್ದ ಕರಾಚಿಯ ರಸ್ತೆಯೊಂದರಲ್ಲಿ ಬೈಕ್‌ವೊಂದು ಸಾಗಿದಾಗ ಕಂಡ ದೃಶ್ಯ (ಎಎಫ್‌ಪಿ)
ಕತ್ತಲು ಆವರಿಸಿದ್ದ ಕರಾಚಿಯ ರಸ್ತೆಯೊಂದರಲ್ಲಿ ಬೈಕ್‌ವೊಂದು ಸಾಗಿದಾಗ ಕಂಡ ದೃಶ್ಯ (ಎಎಫ್‌ಪಿ)   

ಇಸ್ಲಾಮಾಬಾದ್‌: ಪಾಕಿಸ್ತಾನದಲ್ಲಿ ಶನಿವಾರ ರಾತ್ರಿ ವಿದ್ಯುತ್‌ ಪೂರೈಕೆಯಲ್ಲಿ ದಿಢೀರ್‌ ಸಮಸ್ಯೆ ಉಂಟಾಗಿದೆ. ಹೀಗಾಗಿ ದೇಶದ ಪ್ರಮುಖನಗರಗಳೆಲ್ಲವೂಸಮಸ್ಯೆಗೆ ತುತ್ತಾಗಿವೆ.

ಕರಾಚಿ, ರಾವಲ್ಪಿಂಡಿ, ಲಾಹೋರ್‌, ಇಸ್ಲಾಮಾಬಾದ್‌, ಮುಲ್ತಾನ್‌ ಮತ್ತು ಇತರ ಪ್ರಮುಖ ನಗರಗಳ ನಾಗರಿಕರು ವಿದ್ಯುತ್‌ ಪೂರೈಕೆ ಇಲ್ಲದೇ ಸಮಸ್ಯೆ ಅನುಭವಿಸಬೇಕಾಯಿತು.

ಈ ಕುರಿತು ಟ್ವೀಟ್‌ ಮಾಡಿದ್ದ ಇಸ್ಲಾಮಾಬಾದ್‌ನ ಉಪ ಆಯುಕ್ತ ಹಮ್ಜಾ ಶಫ್ಕತ್‌, 'ರಾಷ್ಟ್ರೀಯ ವಿದ್ಯುತ್‌ ಪ್ರಸರಣಾ ಕಂಪನಿಯ (ಎನ್‌ಟಿಡಿಸಿ) ವಿದ್ಯುತ್‌ ಮಾರ್ಗಗಳು ಟ್ರಿಪ್‌ ಆಗಿವೆ. ಹೀಗಾಗಿ ಪೂರೈಕೆಯಲ್ಲಿ ಸಮಸ್ಯೆಯಾಗಿದೆ. ಪರಿಸ್ಥಿತಿ ಸಹಜ ಸ್ಥಿತಿಗೆ ಬರಲು ಸಮಯ ಹಿಡಿಯುತ್ತದೆ,' ಎಂದು ಹೇಳಿದ್ದರು.

ADVERTISEMENT

ರಾಷ್ಟ್ರೀಯ ವಿದ್ಯುತ್‌ ಪ್ರಸರಣಾ ವ್ಯವಸ್ಥೆಯ ಹಠಾತ್‌ ಸ್ಥಗಿತದ ಹಿಂದಿನ ಕಾರಣಗಳನ್ನು ಪತ್ತೆ ಮಾಡಲು ಎನ್‌ಟಿಡಿಸಿ ತಂಡಗಳು ಕಾರ್ಯನಿರ್ವಹಿಸುತ್ತಿವೆ ಎಂದು ವಿದ್ಯುತ್‌ ಪ್ರಸರಣಾ ವ್ಯವಸ್ಥೆಯ ವಕ್ತಾರರ ಮಾಹಿತಿ ಉಲ್ಲೇಖಿಸಿ ಎಕ್ಸ್‌ಪ್ರೆಸ್ ಟ್ರಿಬ್ಯೂನ್ ವರದಿ ಮಾಡಿದೆ.

'ಪ್ರಸರಣೆಯಲ್ಲಿನ ಆವರ್ತನ ಸಂಖ್ಯೆಯು 50ರಿಂದ ದಿಢೀರ್‌ ಸೊನ್ನೆಗೆ ಕುಸಿದಿದೆ. ಹೀಗಾಗಿ ಪೂರೈಕೆಯಲ್ಲಿ ವ್ಯತ್ಯಯವಾಗಿದೆ. ಆವರ್ತನ ಕುಸಿತಕ್ಕೆ ಕಾರಣವೇನು ಎಂಬುದನ್ನು ನಾವು ಪತ್ತೆ ಮಾಡುತ್ತಿದ್ದೇವೆ,' ಎಂದು ಇಂಧನ ಸಚಿವ ಒಮರ್‌ ಅಯೂಬ್‌ ಟ್ವೀಟ್‌ ಮಾಡಿ ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.