ADVERTISEMENT

ಭಾರತದಿಂದ ಪಾಕ್‌ ಮಾರ್ಗವಾಗಿ ಅಫ್ಗನ್‌ಗೆ ಗೋಧಿ: ಮನವಿ ಪರಿಗಣಿಸಲು ಒಪ್ಪಿದ ಇಮ್ರಾನ್

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 13 ನವೆಂಬರ್ 2021, 4:11 IST
Last Updated 13 ನವೆಂಬರ್ 2021, 4:11 IST
ಇಮ್ರಾನ್ ಖಾನ್
ಇಮ್ರಾನ್ ಖಾನ್   

ಇಸ್ಲಾಮಾಬಾದ್: ಪಾಕಿಸ್ತಾನದ ಮೂಲಕ ಭಾರತದ ಗೋಧಿ ಸಾಗಣೆಗೆ ಅನುಮತಿ ನೀಡುವಂತೆ ಅಫ್ಗಾನಿಸ್ತಾನದ ಮನವಿಯನ್ನು ಪರಿಗಣಿಸುವುದಾಗಿ ಪ್ರಧಾನಿ ಇಮ್ರಾನ್ ಖಾನ್ ಶುಕ್ರವಾರ ಹೇಳಿದ್ದಾರೆ.

ಈ ವಿಚಾರವಾಗಿ ಮಾತನಾಡಿರುವ ಅವರು, ‘ಸಂಕಷ್ಟದಲ್ಲಿರುವ ದೇಶವೊಂದರ ಗಂಭೀರ ಬಿಕ್ಕಟ್ಟನ್ನು ಪರಿಹರಿಸಲು ಅಂತರರಾಷ್ಟ್ರೀಯ ಸಮುದಾಯವು ಸಾಮೂಹಿಕ ಜವಾಬ್ದಾರಿಯನ್ನು ಹೊಂದಬೇಕು‘ ಎಂದು ಪ್ರತಿಪಾದಿಸಿದ್ದಾರೆ.

‘ಪಾಕಿಸ್ತಾನದ ಮೂಲಕ ಭಾರತದ ಗೋಧಿ ಸಾಗಣೆಗೆ ಅವಕಾಶ ಮಾಡಿಕೊಡುವಂತೆ ಅಫ್ಗನ್‌ ಸಹೋದರರು ಮನವಿ ಮಾಡಿದ್ದಾರೆ. ಅದನ್ನು ನಾವು ಪರಿಗಣಿಸುತ್ತೇವೆ‘ ಎಂದು ಖಾನ್ ಹೇಳಿದ್ದಾರೆ.

ADVERTISEMENT

ಅಪ್ಗಾನಿಸ್ತಾನದ ವಿದೇಶಾಂಗ ಸಚಿವ ಅಮೀರ್ ಖಾನ್ ಅವರನ್ನು ಒಳಗೊಂಡ ನಿಯೋಗವು ಇಮ್ರಾನ್‌ ಖಾನ್‌ ಅವರಿಗೆ ಈ ಮನವಿಯನ್ನು ಸಲ್ಲಿಸಿದೆ.

ಅಫ್ಗನ್ ಜನರ ಮೂಲಭೂತ ಅಗತ್ಯಗಳಿಗೆ ಭಾರತವು ಕೊಡುಗೆ ನೀಡುತ್ತಲೇ ಬಂದಿದೆ. ಕಳೆದ ದಶಕದಲ್ಲಿ ಅಫ್ಗಾನಿಸ್ತಾನಕ್ಕೆ 1 ಮಿಲಿಯನ್ ಮೆಟ್ರಿಕ್ ಟನ್‌ಗಳಿಗಿಂತ ಹೆಚ್ಚು ಗೋಧಿಯನ್ನು ಒದಗಿಸಿದೆ.

ಕಳೆದ ವರ್ಷ ಭಾರತವು 75,000 ಮೆಟ್ರಿಕ್ ಟನ್ ಗೋಧಿಯನ್ನು ಅಫ್ಗಾನಿಸ್ತಾನಕ್ಕೆ ರವಾನಿಸಿದೆ ಎಂದು ವಿದೇಶಾಂಗ ಸಚಿವ ಎಸ್. ಜೈಶಂಕರ್ ಸೆಪ್ಟೆಂಬರ್‌ನಲ್ಲಿ ತಿಳಿಸಿದ್ದರು.

ಆಗಸ್ಟ್‌ 15ರಂದು ಕಾಬೂಲ್ ಅನ್ನು ತಾಲಿಬಾನ್ ವಶಪಡಿಸಿಕೊಂಡ ಬಳಿಕ ಪಾಕಿಸ್ತಾನವು, ಜಗತ್ತಿನ ಇತರೆ ದೇಶಗಳಿಗೆ ತಾಲಿಬಾನ್ ಜೊತೆಗೆ ರಾಜತಾಂತ್ರಿಕವಾಗಿ ವ್ಯವಹರಿಸಬೇಕು ಎಂದು ಮನವೊಲಿಸಲು ಯತ್ನಿಸುತ್ತಿದೆ. ಆದರೆ, ಅಂತರರಾಷ್ಟ್ರೀಯ ಸಮುದಾಯ ಇಂದಿಗೂ ತಾಲಿಬಾನ್‌ ಕುರಿತಂತೆ ಸಂಶಯಾಸ್ಪದ ಭಾವನೆಯನ್ನೇ ಹೊಂದಿದೆ.

Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.