ADVERTISEMENT

ಪಾಕಿಸ್ತಾನ ಬಡ ರಾಷ್ಟ್ರ: ಇಮ್ರಾನ್‌ ಖಾನ್‌ 

ಪಿಟಿಐ
Published 9 ಜೂನ್ 2020, 3:29 IST
Last Updated 9 ಜೂನ್ 2020, 3:29 IST
ಪಾಕಿಸ್ತಾನ ಪ್ರಧಾನ ಮಂತ್ರಿ ಇಮ್ರಾನ್‌ ಖಾನ್‌
ಪಾಕಿಸ್ತಾನ ಪ್ರಧಾನ ಮಂತ್ರಿ ಇಮ್ರಾನ್‌ ಖಾನ್‌    

ಇಸ್ಲಾಮಾಬಾದ್‌: ಪಾಕಿಸ್ತಾನವು ಬಡ ರಾಷ್ಟ್ರ ಎಂದು ಪ್ರಧಾನ ಮಂತ್ರಿ ಇಮ್ರಾನ್‌ ಖಾನ್‌ ಸ್ವತಃ ಹೇಳಿಕೊಂಡಿದ್ದಾರೆ.

ಕೊರೊನಾ ವೈರಸ್‌ ತಡೆಯಲು ಜಾರಿಗೊಳಿಸಲಾಗಿದ್ದ ಲಾಕ್‌ಡೌನ್‌ ತೆರವುಗೊಳಿಸುವ ಮುನ್ನ ಅವರು ದೇಶಕ್ಕೆ ಈ ಸಂದೇಶ ರವಾನಿಸಿದ್ದಾರೆ.

‘ಪಾಕಿಸ್ತಾನವು ಬಡರಾಷ್ಟ್ರ ಎಂಬುದನ್ನು ನಾವು ಗಮನದಲ್ಲಿಟ್ಟುಕೊಳ್ಳಬೇಕು. ಲಾಕ್‌ಡೌನ್‌ ತೆರವು ಮಾಡದೇ ನಮಗೆಬೇರೆ ಮಾರ್ಗಗಳೇ ಇಲ್ಲ,’ ಎಂದು ಅವರು ಹೇಳಿದ್ದಾರೆ.

ADVERTISEMENT

‘ಕೊರೊನಾ ವೈರಸ್‌ ನಿಯಂತ್ರಿಸಲು ಲಾಕ್‌ಡೌನ್‌ ಪರಿಣಾಮಕಾರಿಯಾದ ಕ್ರಮವಲ್ಲ ಎಂದು ಇಡೀ ಜಗತ್ತು ಹೇಳುತ್ತಿದೆ. ವಿಶ್ವದಲ್ಲೇ ಅತಿ ಹೆಚ್ಚು ಕೊರೊನಾ ವೈರಸ್‌ ಸೋಂಕು ಪ್ರಕರಣಗಳನ್ನು ಹೊಂದಿರುವ ಅಮೆರಿಕದಂಥ ರಾಷ್ಟ್ರವೇ ಲಾಕ್‌ಡೌನ್‌ ತೆರವು ಮಾಡಿದೆ,’ ಎಂದು ಅವರು ಪ್ರತಿಪಾದಿಸಿದ್ದಾರೆ.

ಆದರೆ, ‘ಲಾಕ್‌ಡೌನ್‌ ಜಾರಿಗೊಳಿಸಿದಾಗಸೋಂಕು ಹರಡುವಿಕೆ ಪ್ರಮಾಣ ಕಡಿಮೆ ಇತ್ತು,’ ಎಂದೂ ಅವರು ತಿಳಿಸಿದ್ದಾರೆ.

‘ದಯವಿಟ್ಟು ಎಲ್ಲರೂ ಮಾಸ್ಕ್‌ಗಳನ್ನು ಧರಿಸಿ. ಮಾಸ್ಕ್‌ ಧರಿಸುವುದರಿಂದ ಕೊರೊನಾ ವೈರಸ್‌ ಹರಡುವಿಕೆ ಪ್ರಮಾಣವನ್ನು ಶೇ. 50ರಷ್ಟು ನಿಯಂತ್ರಿಸಬಹುದು ಎಂದು ತಜ್ಞರು ಹೇಳಿದ್ದಾರೆ. ಸಾರ್ವಜನಿಕ ಪ್ರದೇಶಗಳಿಗೆ ಹೋದಾಗ ಸರ್ಕಾರದ ಸೂಚಿಸಿರುವ ಮಾರ್ಗಸೂಚಿಗಳನ್ನು ಪಾಲಿಸಿ,’ಎಂದು ಅವರು ಜನರಿಗೆ ಸಲಹೆ ನೀಡಿದ್ದಾರೆ.

ಭಾರತವೂ ಸೇರಿದಂತೆ ವಿಶ್ವದ ಹಲವು ರಾಷ್ಟ್ರಗಳು ಲಾಕ್‌ಡೌನ್‌ ಅನ್ನು ಹಂತ ಹಂತವಾಗಿ ತೆರವುಗೊಳಿಸುತ್ತಿರುವ ನಡುವೆಯೇ ಪಾಕಿಸ್ತಾನವೂ ಲಾಕ್‌ಡೌನ್‌ ತೆರವು ಮಾಡಲು ಮುಂದಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.