
ಪಿಟಿಐ
ಪಾಕಿಸ್ತಾನದಲ್ಲಿ ಸ್ಫೋಟ
ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿರುವ ವಸತಿ ಸಮುಚ್ಚಯದಲ್ಲಿ ಗುರುವಾರ ಬೆಳಿಗ್ಗೆ ಸಂಭವಿಸಿದ ಸ್ಫೋಟದಲ್ಲಿ ಅನೇಕ ಮಕ್ಕಳು ಸೇರಿದಂತೆ ಕನಿಷ್ಠ 16 ಮಂದಿ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಘಟನೆಯಲ್ಲಿ ಇತರ 14 ಜನರಿಗೆ ಗಾಯಗಳಾಗಿದ್ದು, ಸ್ಫೋಟಕ್ಕೆ ಅನಿಲ ಸೋರಿಕೆ ಕಾರಣವಿರಬಹುದೆಂದು ಪೋಲಿಸರು ಶಂಕಿಸಿದ್ದಾರೆ.
‘ಸ್ಫೋಟದಿಂದ ಕಟ್ಟಡದ ಒಂದು ಭಾಗ ಶಿಥಿಲವಾಗಿ ಕುಸಿದುಬಿದ್ದಿದೆ. ಎರಡರಿಂದ ಹದಿನೇಳು ವರ್ಷದ ಒಂಬತ್ತು ಮಕ್ಕಳು ಮೃತಪಟ್ಟಿದ್ದು, ಏಳು ಮಂದಿ ಗಾಯಗೊಂಡಿದ್ದಾರೆ. 14 ಮೃತದೇಹಗಳನ್ನು ಹೊರತೆಗೆದಿದ್ದು, ಶೋಧ ಕಾರ್ಯಾಚರಣೆ ಮುಂದುವರಿದಿದೆ’ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.