ADVERTISEMENT

ಪಾಕಿಸ್ತಾನದಲ್ಲಿ ಪೋಲಿಯೊ ಪ್ರಕರಣಗಳಲ್ಲಿ ಏರಿಕೆ: ಲಸಿಕೆ ಅಭಿಯಾನ

ಏಜೆನ್ಸೀಸ್
Published 28 ನವೆಂಬರ್ 2022, 13:43 IST
Last Updated 28 ನವೆಂಬರ್ 2022, 13:43 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಇಸ್ಲಾಮಾಬಾದ್ (ಎಪಿ): ‘ಪಾಕಿಸ್ತಾನದಲ್ಲಿ ಪೋಲಿಯೊ ಪ್ರಕರಣಗಳು ಹೆಚ್ಚು ವರದಿಯಾಗುತ್ತಿದ್ದು, ದೇಶದಾದ್ಯಂತ ಪೋಲಿಯೊ ತಡೆ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ’ ಎಂದು ಆರೋಗ್ಯ ಅಧಿಕಾರಿಗಳು ಹೇಳಿದ್ದಾರೆ.

‘ದೇಶದಲ್ಲಿ ಹೆಚ್ಚು ಪೋಲಿಯೊ ಪ್ರಕರಣಗಳು ವರದಿಯಾಗುತ್ತಿರುವ ಪ್ರದೇಶಗಳಲ್ಲಿ, ಈ ವರ್ಷದಲ್ಲಿಯೇ ಆರನೇ ಬಾರಿಗೆ ಐದು ದಿನಗಳ ಪೋಲಿಯೊ ಲಸಿಕೆ ಅಭಿಯಾನವನ್ನು ಹಮ್ಮಿಕೊಳ್ಳಲಾಗುತ್ತಿದೆ. ಇಸ್ಲಾಮಾಬಾದ್‌, ಪೂರ್ವ ಪಂಜಾಬ್ ಮತ್ತು ಬಲುಚಿಸ್ತಾನದ ನೈರುತ್ಯ ಭಾಗಗಳಲ್ಲಿ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ’ ಎಂದು ಆರೋಗ್ಯ ಅಧಿಕಾರಿಗಳು ಮಾಹಿತಿ ನೀಡಿದರು.

‘ಈ ವರ್ಷದ ಏಪ್ರಿಲ್‌ನಿಂದ ಈಚೆಗೆ, 20 ಪೋಲಿಯೊ ಪ್ರಕರಣಗಳು ವರದಿಯಾಗಿವೆ. ದೇಶದಲ್ಲಿ ಪೋಲಿಯೊ ಪ್ರಕರಣಗಳು ನಿಂತೇ ಹೋಗಿತ್ತು ಎನ್ನುವ ಸ್ಥಿತಿ ನಿರ್ಮಾಣವಾಗಿತ್ತು. ಕಳೆದ ವರ್ಷ ಕೇವಲ ಒಂದು ಪ್ರಕರಣವಷ್ಟೇ ದಾಖಲಾಗಿತ್ತು’ ಎಂದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.