
ಪ್ರಜಾವಾಣಿ ವಾರ್ತೆ
ಲಾಹೋರ್: ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದಲ್ಲಿ ದಟ್ಟ ಮಂಜು ಆವರಿಸಿದ್ದರಿಂದಾಗಿ ರಸ್ತೆ ಗೋಚರಿಸದೇ ಆಯತಪ್ಪಿದ ಲಾರಿಯೊಂದು ಸೇತುವೆಯಿಂದ ಕಂದಕಕ್ಕೆ ಬಿದ್ದ ಪರಿಣಾಮ ಆರು ಮಕ್ಕಳು, ಐವರು ಮಹಿಳೆಯರು ಸೇರಿದಂತೆ 14 ಮಂದಿ ಮೃತಪಟ್ಟಿದ್ದಾರೆ.
ಸರ್ಗೋಧಾ ಜಿಲ್ಲೆಯ ಕೋಟ್ ಮೊಮಿನ್‌ನಲ್ಲಿ ಶನಿವಾರ ಮುಂಜಾನೆ ಅಪಘಾತ ಸಂಭವಿಸಿದೆ. ಇಸ್ಲಾಮಾಬಾದ್‌ನಿಂದ ಫೈಸಲಾಬಾದ್‌ಗೆ ಅಂತ್ಯಸಂಸ್ಕಾರಕ್ಕೆಂದು 23 ಜನರು ಲಾರಿಯಲ್ಲಿ ತೆರಳುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.