ಪಾಕಿಸ್ತಾನದಲ್ಲಿ ಭಾರಿ ಮಳೆ
ಲಾಹೋರ್: ಪಾಕಿಸ್ತಾನದಲ್ಲಿ ಕೆಲವು ಪ್ರಾಂತ್ಯಗಳಲ್ಲಿ ಕಳೆದ ನಾಲ್ಕೈದು ದಿನಗಳಿಂದ ಭಾರಿ ಮಳೆ ಸುರಿಯುತ್ತಿದ್ದು ಮಳೆ ಸಂಬಂಧಿತ ಘಟನೆಗಳಲ್ಲಿ ಈವರೆಗೆ 170 ಜನರು ಮೃತಪಟ್ಟಿದ್ದಾರೆ.
ಹೀಗಾಗಿ ಪ್ರಾಂತೀಯ ಸರ್ಕಾರವು ಹಲವೆಡೆ ‘ಮಳೆ ತುರ್ತುಪರಿಸ್ಥಿತಿ’ಯನ್ನು ಘೋಷಿಸಿದೆ.
ಕಳೆದ 24 ಗಂಟೆಗಳಲ್ಲಿ ಪಂಜಾಬ್ ಪ್ರಾಂತ್ಯದಲ್ಲಿ ಭಾರಿ ಮಳೆ ಮತ್ತು ಪ್ರವಾಹದಿಂದ 30 ಜನರು ಸಾವಿಗೀಡಾಗಿದ್ದಾರೆ. ದೇಶದಾದ್ಯಂತ ಮಳೆ ಸಂಬಂಧಿತ ಘಟನೆಗಳಲ್ಲಿ ಈವರೆಗೆ 170 ಜನರು ಮೃತಪಟ್ಟಿದ್ದಾರೆ. 300ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ಗುರುವಾರ ಮಾಹಿತಿ ನೀಡಿದರು.
ಪಂಜಾಬ್‌ನ ಚಕ್ವಾಲ್ ಪ್ರದೇಶವು ಮಳೆಯಿಂದ ತೀವ್ರ ಹಾನಿಗೊಳಗಾಗಿದೆ. ಇಲ್ಲಿ 24 ಗಂಟೆಗಳಲ್ಲಿ 423 ಮಿ.ಮೀ. ಮಳೆಯಾಗಿದ್ದು, ಪ್ರವಾಹ ಉಂಟಾಗಿದೆ.
ಚಕ್ವಾಲ್‌ನಲ್ಲಿ ಪ್ರವಾಹದಲ್ಲಿ ಸಿಲುಕಿರುವ ಜನರ ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ. ಜನರನ್ನು ಸುರಕ್ಷಿತ ಪ್ರದೇಶಗಳಿಗೆ ಸ್ಥಳಾಂತರಿಸಲಾಗುತ್ತಿದೆ ಎಂದು ಪ್ರಾಂತೀಯ ವಿಪತ್ತು ನಿರ್ವಹಣಾ ಪ್ರಾಧಿಕಾರವು ತನ್ನ ಹೇಳಿಕೆಯಲ್ಲಿ ತಿಳಿಸಿದೆ.
ಇನ್ನೂ ಹೆಚ್ಚಿನ ಪ್ರದೇಶಗಳಿಗೆ ಮಳೆ ಆವರಿಸುವ ಮುನ್ಸೂಚನೆ ಇದ್ದು, ಪಂಜಾಬ್ ಪ್ರಾಂತ್ಯದಾದ್ಯಂತ ಜನರಿಗೆ ಎಚ್ಚರಿಕೆ ನೀಡಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.