ADVERTISEMENT

ಪಾಕಿಸ್ತಾನ: ರೈಲು ಅಪಘಾತದಲ್ಲಿ ಮೃತಪಟ್ಟವರ ಸಂಖ್ಯೆ 63ಕ್ಕೆ ಏರಿಕೆ

ಏಜೆನ್ಸೀಸ್
Published 8 ಜೂನ್ 2021, 8:31 IST
Last Updated 8 ಜೂನ್ 2021, 8:31 IST
ಪಾಕಿಸ್ತಾನದ ದಕ್ಷಿಣ ಸಿಂಧ್‌ ಪ್ರಾಂತ್ಯದಲ್ಲಿ ರೈಲು ಅಪಘಾತ ಸಂಭವಿಸಿದ ಸ್ಥಳಕ್ಕೆ ಆಗಮಿಸಿದ ಭದ್ರತಾ ಸಿಬ್ಬಂದಿ               –ಎಎಫ್‌ಪಿ ಚಿತ್ರ
ಪಾಕಿಸ್ತಾನದ ದಕ್ಷಿಣ ಸಿಂಧ್‌ ಪ್ರಾಂತ್ಯದಲ್ಲಿ ರೈಲು ಅಪಘಾತ ಸಂಭವಿಸಿದ ಸ್ಥಳಕ್ಕೆ ಆಗಮಿಸಿದ ಭದ್ರತಾ ಸಿಬ್ಬಂದಿ               –ಎಎಫ್‌ಪಿ ಚಿತ್ರ   

ದಹರ್ಕಿ: ‘ಪಾಕಿಸ್ತಾನದ ದಕ್ಷಿಣ ಸಿಂಧ್‌ ಪ್ರಾಂತ್ಯದಲ್ಲಿ ಸೋಮವಾರ ಬೆಳಿಗ್ಗೆ ಸಂಭವಿಸಿದ ರೈಲು ಅಪಘಾತದಲ್ಲಿ ಸಾವಿಗೀಡಾದವರ ಸಂಖ್ಯೆ 63ಕ್ಕೆ ಏರಿದೆ’ ಎಂದು ಅಧಿಕಾರಿಗಳು ಮಂಗಳವಾರ ತಿಳಿಸಿದರು.

12 ಅಪರಿಚಿತ ವ್ಯಕ್ತಿಗಳು ಸೇರಿದಂತೆ ರೈಲು ಅಪಘಾತದಲ್ಲಿ ಮೃತಪಟ್ಟವರ ಪಟ್ಟಿಯನ್ನು ಸಿಂಧ್‌ ಪ್ರಾಂತ್ಯದ ಉಪ ಆಯುಕ್ತ ಉಸ್ಮಾನ್ ಅಬ್ದುಲ್ಲಾ ಅವರು ಬಿಡುಗಡೆ ಮಾಡಿದ್ದಾರೆ.

ಸೋಮವಾರ ಎರಡು ಪ್ರಯಾಣಿಕ ರೈಲಿನ ನಡುವೆ ಅಪಘಾತ ಸಂಭವಿಸಿತ್ತು. ಕರಾಚಿಯಿಂದ ಸರ್‌ಗೊಧಾಕ್ಕೆ ಹೋಗುತ್ತಿದ್ದ ಮಿಲ್ಲತ್‌ ಎಕ್ಸ್‌ಪ್ರೆಸ್‌ ರೈಲು ಹಳಿ ತಪ್ಪಿ, ಅದರ ಬೋಗಿಗಳು ಪಕ್ಕದ ಹಳಿ ಮೇಲೆ ಉರುಳಿಬಿದ್ದಿತ್ತು. ಇದೇ ವೇಳೆ ಇನ್ನೊಂದು ಬದಿಯಿಂದ ಬಂದ ಸರ್‌ ಸೈಯದ್‌ ಎಕ್ಸ್‌ಪ್ರೆಸ್‌ ರೈಲು ಇದಕ್ಕೆ ಡಿಕ್ಕಿ ಹೊಡೆದಿತ್ತು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.