ADVERTISEMENT

ಪಾಕಿಸ್ತಾನದಲ್ಲಿ ಹಿಂದೂ ವಿದ್ಯಾರ್ಥಿನಿಯ ಅನುಮಾನಾಸ್ಪದ ಸಾವು: ಪ್ರತಿಭಟನೆ

ಏಜೆನ್ಸೀಸ್
Published 18 ಸೆಪ್ಟೆಂಬರ್ 2019, 4:53 IST
Last Updated 18 ಸೆಪ್ಟೆಂಬರ್ 2019, 4:53 IST
   

ಕರಾಚಿ: ಪಾಕಿಸ್ತಾನದಲ್ಲಿ ಹಿಂದೂ ವೈದ್ಯಕೀಯ ವಿದ್ಯಾರ್ಥಿನಿಯ ಅನುಮಾನಾಸ್ಪದ ಸಾವಿನ ಕುರಿತು ತನಿಖೆ ನಡೆಸುವಂತೆ ಆಗ್ರಹಿಸಿ ಸಿಂದ್‌ ಪ್ರಾಂತ್ಯದ ನಾಗರೀಕರು ಕಳೆದ ರಾತ್ರಿ ಪ್ರತಿಭಟನೆ ನಡೆಸಿದ್ದಾರೆ.

ಸಿಂಧ್ ಪ್ರಾಂತ್ಯದದಂತ ವೈದ್ಯಕೀಯ ಕಾಲೇಜಿನಲ್ಲಿನಮ್ರತಾ ಚಾಂದಿನಿ ವಿದ್ಯಾಭ್ಯಾಸ ಮಾಡುತ್ತಿದ್ದರು.ನಮ್ರತಾ ಚಾಂದಿನಿ ವಾಸವಿದ್ದ ವಸತಿ ನಿಲಯದಲ್ಲಿ ಅವರ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಮಂಗಳವಾರ ಪತ್ತೆಯಾಗಿತ್ತು. ನಮ್ರತಾ ಚಾಂದಿನಿಯನ್ನು ಹತ್ಯೆ ಮಾಡಲಾಗಿದೆ ಎಂದು ಅವರು ಕುಟುಂಬದವರು,ಸಂಬಂಧಿಕರು ಹಾಗೂ ವಿದ್ಯಾರ್ಥಿಗಳು ಶಂಕೆ ವ್ಯಕ್ತಪಡಿಸಿದ್ದಾರೆ.

ಘಟನೆ ಸಂಬಂಧ ಪಾಕಿಸ್ತಾನ ಪೊಲೀಸರು ವೈದ್ಯಕೀಯ ಕಾಲೇಜಿನ ಪ್ರಾಂಶುಪಾಲರ ವಿರುದ್ಧ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ADVERTISEMENT

ನಮ್ರತಾ ಚಾಂದಿನಿಯಅನುಮಾನಾಸ್ಪದ ಸಾವಿನ ಬಗ್ಗೆ ತನಿಖೆ ನಡೆಸಿ ತಪ್ಪತಸ್ಥರಿಗೆ ಕಠಣ ಶಿಕ್ಷೆ ನೀಡಬೇಕು ಎಂದು ಆಗ್ರಹಿಸಿ ಸಿಂದ್‌ ಪ್ರಾಂತ್ಯ ಹಾಗೂ ಕರಾಚಿಯಲ್ಲಿಪ್ರತಿಭಟನೆಗಳು ನಡೆಯುತ್ತಿವೆ. ಕಳೆದ ರಾತ್ರಿಯಿಂದ ಪ್ರತಿಭಟನೆಗಳು ಆರಂಭವಾಗಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.