ಇಸ್ಲಾಮಾಬಾದ್: ಅಫ್ಗಾನಿಸ್ತಾನದ ಪ್ರಚೋದನಕಾರಿ ದಾಳಿಗಳಿಗೆ ತಕ್ಕ ಪ್ರತ್ಯುತ್ತರ ನೀಡುತ್ತೇವೆ ಎಂದು ಪಾಕಿಸ್ತಾನ ಪ್ರಧಾನಿ ಶೆಹಬಾಜ್ ಷರೀಫ್ ಹೇಳಿದ್ದಾರೆ.
ಶನಿವಾರ ರಾತ್ರಿಯಿಂದ ಉಭಯ ದೇಶಗಳ ಗಡಿಯಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ.
‘ಪಾಕಿಸ್ತಾನದ ರಕ್ಷಣೆಯ ವಿಷಯದಲ್ಲಿ ಯಾವುದೇ ರೀತಿಯ ರಾಜಿ ಮಾಡಿಕೊಳ್ಳುವುದಿಲ್ಲ. ಪ್ರಚೋದನಕಾರಿ ದಾಳಿಗಳಿಗೆ ತಕ್ಕ ಪ್ರತ್ಯುತ್ತರ ನೀಡುತ್ತೇವೆ’ ಎಂದು ಶೆಹಬಾಜ್ ಷರೀಫ್ ತಿಳಿಸಿದ್ದಾರೆ.
ತಾಲಿಬಾನ್ ಸರ್ಕಾರವು ಅಫ್ಗಾನಿಸ್ತಾನದ ನೆಲವನ್ನು ಭಯೋತ್ಪಾದಕ ಚಟುವಟಿಕೆಗಳಿಗೆ ಬಳಸಿಕೊಳ್ಳುತ್ತಿದೆ ಎಂದು ಆರೋಪಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.