ADVERTISEMENT

ಮುಷರಫ್‌ಗೆ ಗಲ್ಲು: ಪಾಕ್ ಪ್ರಧಾನಿ ತುರ್ತುಸಭೆ

ಪಿಟಿಐ
Published 18 ಡಿಸೆಂಬರ್ 2019, 19:41 IST
Last Updated 18 ಡಿಸೆಂಬರ್ 2019, 19:41 IST

ಇಸ್ಲಾಮಾಬಾದ್: ಪಾಕಿಸ್ತಾನದ ಮಾಜಿ ಅಧ್ಯಕ್ಷ ಪರ್ವೇಜ್ ಮುಷರಫ್ ಅವರಿಗೆ ಗಲ್ಲು ಶಿಕ್ಷೆ ಪ್ರಕಟಿಸಿರುವ ಕುರಿತು ಚರ್ಚಿಸಲು ಪಾಕಿಸ್ತಾನದ ಪ್ರಧಾನಿ ಇಮ್ರಾನ್ ಖಾನ್ ತಮ್ಮ ಪಕ್ಷದ ಕೇಂದ್ರ ಸಮಿತಿಯ ತುರ್ತು ಸಭೆ ಕರೆದಿದ್ದಾರೆ.

ಮುಷರಫ್‌ಗೆ ಗಲ್ಲು ಶಿಕ್ಷೆ ವಿಧಿಸುವ ನೀತಿನಿಯಮದ ಕುರಿತು ಪಕ್ಷದ ಹಿರಿಯ ಮುಖಂಡರ ಜತೆ ಚರ್ಚೆ ನಡೆಸಲಿದ್ದಾರೆ ಎಂದು ಆಡಳಿತಾರೂಢ ತೆಹ್ರೀಕ್–ಎ–ಇನ್ಸಾಫ್‌ ಪಕ್ಷದ ಮೂಲಗಳು ತಿಳಿಸಿವೆ.

ಸೇನಾ ಮುಖ್ಯಸ್ಥರ ಸೇವೆಯ ವಿಸ್ತರಣೆ ಮತ್ತು ಮುಖ್ಯ ಚುನಾವಣಾ ಆಯುಕ್ತರು ಮತ್ತು ಚುನಾವಣಾ ಸಂಸ್ಥೆಯ ಇತರ ಸದಸ್ಯರ ನೇಮಕ ಕುರಿತ ಶಾಸನಗಳಿಗೆ ಸಂಬಂಧಿಸಿದ ವಿಷಯಗಳ ಬಗ್ಗೆಯೂ ಸಭೆಯಲ್ಲಿ ಚರ್ಚಿಸಲಾಗುವುದು ಎಂದು ಹೇಳಲಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.