ADVERTISEMENT

ಪಾಕಿಸ್ತಾನ ಟಿವಿ ನಿರೂಪಕ ಬಂಧನ; ಮಾಜಿ ಪ್ರಧಾನಿ ಇಮ್ರಾನ್ ಖಾನ್‌ ಖಂಡನೆ

ಏಜೆನ್ಸೀಸ್
Published 6 ಜುಲೈ 2022, 13:47 IST
Last Updated 6 ಜುಲೈ 2022, 13:47 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಇಸ್ಲಾಮಾಬಾದ್‌: ಪಾಕಿಸ್ತಾನದ ಖ್ಯಾತ ಟಿವಿ ನಿರೂಪಕ ಇಮ್ರಾನ್‌ ರಿಯಾಝ್‌ ಖಾನ್‌ ಅವರನ್ನು ರಾಜಧಾನಿಯ ಹೊರವಲಯದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಅವರ ಸಹೋದ್ಯೋಗಿಗಳು ತಿಳಿಸಿದ್ದಾರೆ.

ರಿಯಾಝ್‌ ಅವರ ಬಂಧನಕ್ಕೆ ಕಾರಣ ಏನು ಎಂಬುದು ಸ್ಪಷ್ಟವಾಗಿಲ್ಲ. ಸರ್ಕಾರ ಸಹ ಈ ಕುರಿತು ಯಾವುದೇ ಹೇಳಿಕೆ ನೀಡಿಲ್ಲ. ರಿಯಾಝ್‌, ಮಾಜಿ ಪ್ರಧಾನಿ ಇಮ್ರಾನ್‌ ಖಾನ್‌ ಅವರನ್ನು ಬಹಿರಂಗವಾಗಿ ಬೆಂಬಲಿಸುತ್ತಿದ್ದರು.

ದೇಶದ ಸೇನೆ ವಿರುದ್ಧ ದ್ವೇಷ ಬಿತ್ತಿದ ಆರೋಪ ಸಂಬಂಧ ರಿಯಾಝ್‌ ಮತ್ತಿತರರ ವಿರುದ್ಧ ದೂರು ದಾಖಲಾಗಿತ್ತು. ಆದರೆ ಪ್ರಕರಣದಲ್ಲಿ ಯಾರನ್ನೂ ಬಂಧಿಸದಂತೆ ಇಸ್ಲಾಮಾಬಾದ್‌ ಹೈಕೋರ್ಟ್‌ ಆದೇಶ ನೀಡಿತ್ತು. ಈ ಬೆನ್ನಲ್ಲೇ ರಿಯಾಝ್‌ ಅವರನ್ನು ಬಂಧಿಸಲಾಗಿದೆ.

ADVERTISEMENT

ಮಾಜಿ ಪ್ರಧಾನಿ ಇಮ್ರಾನ್‌ ಖಾನ್‌ ಅವರು ರಿಯಾಝ್‌ ಬಂಧನವನ್ನು ಖಂಡಿಸಿ ಟ್ವೀಟ್‌ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.